Friday, August 8, 2025

Latest Posts

ಆಂಧ್ರದಲ್ಲಿ ಲಿಂಬಾವಳಿ ಆಪ್ತನ ಬರ್ಬರ ಹತ್ಯೆ!

- Advertisement -

ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಅವರನ್ನ ಕಿಡ್ನ್ಯಾಪ್ ಮಾಡಿ, ಅವರನ್ನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ವೀರಸ್ವಾಮಿ ರೆಡ್ಡಿ ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಆಪ್ತರಾಗಿದ್ದರು. ಮುಂಬರುವ ಬಿಬಿಎಂಪಿ ಚುನಾವಣೆಗೆ ತಯಾರಿ ನಡೆಸುತ್ತಿದ್ದರು. ತಂದೆ ವೀರಸ್ವಾಮಿ ರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿ ತಮ್ಮ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಪಟ್ಲದ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅದರ ನಂತರವೇ ಈ ಭೀಕರ ಘಟನೆ ನಡೆಯುತ್ತದೆಯೆಂಬ ಶಂಕೆಯಿದೆ.

ಕಳೆದ ಕೆಲವು ತಿಂಗಳುಗಳಿಂದ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿಯವರು ಬೆಂಗಳೂರು ಮೂಲದ ಮಾರ್ವಲ್ ಬಿಲ್ಡರ್ ಮಾಧವರೆಡ್ಡಿ ಹಾಗೂ ಅನಿಲ್ ರೆಡ್ಡಿ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶದಲ್ಲೂ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಿನ್ನೆ ರಾತ್ರಿ ಅವರು ಬಾಪಟ್ಲದತ್ತ ಪ್ರಯಾಣ ಹೊರಟು ನ್ಯಾಯಾಲಯಕ್ಕೆ ಹಾಜರಾದರು. ಆದರೆ ಅಲ್ಲೇ ಮಾಧವರೆಡ್ಡಿ ಹಾಗೂ ಅನಿಲ್ ರೆಡ್ಡಿಯವರು ಅವರೊಂದಿಗೆ ರಾಜಿಯ ಮಾತುಗಳನ್ನಾಡುತ್ತ, ಸ್ಕಾರ್ಪಿಯೋ ಕಾರಿನಲ್ಲಿ ಕರೆದುಕೊಂಡು ಹೋಗಿ ಕಿಡ್ನ್ಯಾಪ್ ಮಾಡಿದ್ದಾರೆ. ನಂತರ ಬರ್ಬರವಾಗಿ ಅವರಿಬ್ಬರ ಕತ್ತು ಸೀಳಿ, ದೇಹಗಳನ್ನು ಹೆದ್ದಾರಿಯ ಪಕ್ಕದಲ್ಲಿ ಬಿಸಾಡಿರುವ ಶಾಕಿಂಗ್ ದೃಶ್ಯ ಇದೀಗ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಾಪಟ್ಲ ಪೊಲೀಸ್‌ ಠಾಣೆಯಲ್ಲಿ ಎರಡು ಕೊಲೆ ಆರೋಪ ದಾಖಲಾಗಿದ್ದು, ತನಿಖೆ ಚುರುಕಾಗಿದೆ.

- Advertisement -

Latest Posts

Don't Miss