ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಆರಂಭಿಸಿದ್ದ “ಫೀಡಿಂಗ್ ಸ್ಪಾಟ್” ಯೋಜನೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾಯಿಗಳಿಗೆ ಸುರಕ್ಷಿತವಾಗಿ ಆಹಾರ ನೀಡುವ ಜೊತೆಗೆ, ಮಾನವ-ನಾಯಿ ಸಂಘರ್ಷ ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ 450 ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿ ಫೀಡಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿತ್ತು.
ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ಜನಸಂದಣಿ ಪ್ರದೇಶಗಳಿಂದ ದೂರ ಇರುವ ಜಾಗಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಅನಿಮಲ್ ವೆಲ್ಫೇರ್ ಸ್ವಯಂಸೇವಕರು ಹಾಗೂ ನಾಯಿಗಳಿಗೆ ಆಹಾರ ನೀಡುವವರು, ಗುರುತಿಸಿರುವ ಹಲವು ಜಾಗಗಳು ನಾಯಿಗಳು ಸಾಮಾನ್ಯವಾಗಿ ಇರುವ ಪ್ರದೇಶಗಳಿಂದ ಬಹಳ ದೂರದಲ್ಲಿವೆ ಎಂದು ಆಕ್ಷೇಪಿಸಿದ್ದಾರೆ.
ಕೆಲವು ಫೀಡಿಂಗ್ ಸ್ಪಾಟ್‌ಗಳು ಈಗ ಕಸದ ತೊಟ್ಟಿಗಳಂತಾಗಿವೆ ಎಂಬ ಆರೋಪವೂ ಕೇಳಿಬಂದಿದೆ. “ನಾಯಿಗಳನ್ನು ಒಂದು ಏರಿಯಾದಿಂದ ಮತ್ತೊಂದು ಜಾಗಕ್ಕೆ ಕರೆತರುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ. ಟ್ರಾಫಿಕ್ ಮತ್ತು ಜನಸಂದಣಿ ಇರುವ ಕಡೆಗಳಲ್ಲಿ ಫೀಡಿಂಗ್ ಪಾಯಿಂಟ್ ಮಾಡಿರುವುದು ನಾಯಿಗಳಿಗೂ, ನಿವಾಸಿಗಳಿಗೂ ಸುರಕ್ಷಿತವಲ್ಲ” ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪಾಲಿಕೆ ಅಧಿಕಾರಿಗಳು, ಕೆಲವು ಪ್ರದೇಶಗಳಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿರುವುದರಿಂದ ಸೂಕ್ತ ಜಾಗಗಳನ್ನು ಗುರುತಿಸಲು ಕಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ. ನಿವಾಸಿಗಳ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಂಡರೆ ಮಾತ್ರ ಈ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಎಂಬ ಅಭಿಪ್ರಾಯವೂ ಕೇಳಿಬಂದಿದೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ರಕ್ಷಣೆ ಕೋರಿ ವಕ್ಫ್ ಬೋರ್ಡ್ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಬ್ಬಗಳ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷವು ಎಲ್ಲ ಸಮುದಾಯಗಳನ್ನು ಸಮಾನ ದೃಷ್ಟಿಯಿಂದ ನೋಡುತ್ತದೆ ಎಂದು ಹೇಳಿದರು.




