Bengaluru: ನಕಲಿ ಔಷಧ ಮಾರುತ್ತಿದ್ದ 8 ಸಂಸ್ಥೆಗಳ, 16 ಔಷಧ ವಿತರಕರು ಪರವಾನಗಿ ರದ್ದು: ಸಚಿವ ಖಾದರ್

Political News: ರಾಜ್ಯದಲ್ಲಿ ಆತಂಕ ಮೂಡಿಸಿರುವ ದೊಡ್ಡ ಮಟ್ಟದ ನಕಲಿ ಔಷಧಿ ಜಾಲದ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗ“ಳ್ಳುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಖಾದರ್, ರಾಜ್ಯದಲ್ಲಿ ದೊಡ್ಡ ಮಟ್ಟದ ನಕಲಿ ಔಷಧಿ ಜಾಲವನ್ನು ನಮ್ಮ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪತ್ತೆ ಹಚ್ಚಿದೆ. ಆಗಸ್ಟ್ 19ರಂದು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಜೊತೆ ಚರ್ಚಿಸಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಈ ತನಿಖೆಯ ಮುಂದುವರಿದ ಭಾಗವಾಗಿ, ನಮ್ಮ ಅರೋಗ್ಯ ಮತ್ತು ಕುಟುಂಬ ಇಲಾಖೆಯ, ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಕಠಿಣ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ ನಕಲಿ ಔಷಧಿಗಳ ವಿತರಣೆ ಮತ್ತು ಮಾರಾಟದಲ್ಲಿ ತೊಡಗಿದ್ದ 16 ಔಷಧ ವಿತರಕರು ಹಾಗೂ ಚಿಲ್ಲರೆ ಮಾರಾಟಗಾರರ ಪರವಾನಗಿಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ 8 ಸಂಸ್ಥೆಗಳ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಖಾದರ್ ಹೇಳಿದ್ದಾರೆ.
ಜನರ ಜೀವದ ಜೊತೆ ಆಟವಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. SIT ವರದಿ ಬಂದ ನಂತರ ತಪ್ಪಿತಸ್ಥರು ಎಷ್ಟೇ ದೊಡ್ಡವರಾಗಿರಲಿ, ಎಷ್ಟೇ ಬಲಿಷ್ಠರಾಗಿರಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಖಚಿತ ಎಂದು ಆರೋಗ್ಯ ಸಚಿವರಾದ ಖಾದರ್ ಹೇಳಿದ್ದಾರೆ.

About The Author