Sunday, September 8, 2024

Latest Posts

ಬೆಂಗಳೂರು – ಮೈಸೂರು ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ : ಸಂಸದೆ ಸುಮಲತಾ ಅಂಬರೀಷ್‌

- Advertisement -

ನವದೆಹಲಿ: ಹೊಸದಾಗಿ ನಿರ್ಮಾಣವಾಗಿರುವ ಬೆಂಗಳೂರು – ಮೈಸೂರು ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಲೋಕಸಭೆಯಲ್ಲಿ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯ ವೇಳೆ ಈ ವಿಷಯ ಪ್ರಸ್ತಾಪಿಸಿದ ಸುಮಲತಾ ಅವರು ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತಗೊಳಿಸಲು ದಶಪಥ ಹೆದ್ದಾರಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಮಂಡ್ಯ ಕ್ಷೇತ್ರದ ಮೂಲಕವೂ ಈ ಹೆದ್ದಾರಿ ಹಾದು ಹೋಗುತ್ತದೆ. ಆದರೆ, ಭಾರಿ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸಿದೆ ಮತ್ತು ರಸ್ತೆಗೆ ಹಾಕಿದ್ದ ಡಾಂಬರು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಗುಣಮಟ್ಟದ ರಸ್ತೆಯನ್ನು ನಿರ್ಮಿಸಿಲ್ಲ ಎಂದು ಹೇಳಿದರು.

5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

ಅವೈಜ್ಞಾನಿಕ ವಿಧಾನದಲ್ಲಿ ಕಾಮಗಾರಿಯನ್ನಯ ಕೈಗೊಂಡಿದ್ದಾರೆ. ರಸ್ತೆ ಅಕ್ಕಪಕ್ಕದಲ್ಲಿರುವ ಚರಂಡಿಗಳ ಕಾಮಗಾರಿಯನ್ನೂ ಕೂಡ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದ ರೈತರ ಸಾವಿರಾರು ಹೆಕ್ಟೇರ್‌ ಬೆಳೆಗಳು ನಾಶವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಈ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕೇಂದ್ರದ ಸಚಿವರು ಈ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಮಂಡ್ಯ ಜನರು ಆಗ್ರಹಿಸಿದ್ದರು.

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

- Advertisement -

Latest Posts

Don't Miss