Bengaluru News: ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

Bengaluru Crime News: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. 20 ವರ್ಷದ ವಿದ್ಯಾರ್ಥಿನಿ ತೇಜು ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈಕೆ ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯಕರನ ಬಳಿ ನಾನು ಸಾಯುತ್ತಿದ್ದೇನೆ ಎಂದು ಮೆಸೇಜ್ ಕಳುಹಿಸಿದ್ದಳೆಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ, ಸದಾಶಿವ ನಗರ ಪೋಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಮಾಹಿತಿಯ ಪ್ರಕಾರ, ತೇಜು ಪೋಷಕರು ವಿಚ್ಛೇದನ ಪಡೆದಿದ್ದು, ತೇಜು ತಾಯಿಯ ಜತೆ ವಾಸವಿದ್ದಳು. ತೇಜುನ ತಾಯಿ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದು, ತೇಜು ಚಿಕ್ಕ ಬಾಣಾವರ ಸಮೀಪದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಸದ್ಯ ಪೋಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ತೇಜುವಿನ ಮನೆಯವರ ಬಳಿ ಆಕೆಯ ಪ್ರಿಯಕರನ ಬಗ್ಗೆ ಮಾಹಿತಿ ಪಡೆದಿರುವ ಪೋಲೀಸರು, ಇದು ಪ್ರೇಮ ವೈಫಲ್ಯದ ಆತ್ಮಹತ್ಯೆಯೋ ಅಥವಾ ಸಾವಿಗೆ ಬೇರೆ ಕಾರಣವಿದೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

About The Author