Rain
ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ 3 ದಿನಗಳ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರೆಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ2 ದಿನಗಳಿಂದ ಮಳೆ ಶುರುವಾಗಿದ್ದು, ಮಲೆನಾಡು, ಉತ್ತರ ಒಳನಾಡು, ಕರಾವಳಿಯಲ್ಲಿ ನೆವೆಂಬರ್ 6ರವೆರೆಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮಳೆ 2 ದಿನದಿಂದ ಹೆಚ್ಚಾಗಿರುವುದರಿಂದ ತಗ್ಗುಪ್ರದೇಶ, ರಾಜಕಾಲುವೆಯ ಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ