Tuesday, September 17, 2024

Latest Posts

ಮಾಂಡೌಸ್ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾವಗುವ ಸಾಧ್ಯತೆ

- Advertisement -

ಬೆಂಗಳೂರು: ಮಳೆಗಾಲ ಮುಗಿದರೂ ಮಳೆ ಮಾತ್ರ ನಿಲ್ಲುತ್ತಿಲ್ಲ, 2-3 ದಿನದಿಂದ ಶುರುವಾಗಿರುವ ಮಳೆ ಮುಂದೆವರೆಯುವ ಸಾಧ್ಯತೆ ಇದೆ. ಮಾಂಡೌಸ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​​​ ಘೋಷಿಸಲಾಗಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ಮೇಲೆ ಅದರಲ್ಲೂ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ ‘ಮಾಂಡೌಸ್’ ಪ್ರಭಾವ ಹೆಚ್ಚಾಗಿರಲಿದೆ. ಇಂದು ಮತ್ತು ಡಿ. 12ರಂದು ಮಲೆನಾಡು, ಕರಾವಳಿಯಲ್ಲಿ ಧಾರಾಕಾರವಾಗಿ ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’

ಉತ್ತರ ಒಳನಾಡಿನ ಕೊಪ್ಪಳ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಮಳೆಯಾಗಲಿದೆ.ಮಾಂಡೌಸ್ ಚಂಡಮಾರುತದಿಂದಾಗಿ ಡಿ. 13ರವರೆಗೂ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಇಂದು ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ ಘೊಷಿಸಲಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮಾಹಿತಿ ನೀಡಿದೆ.

ಹರಿವೆ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..

- Advertisement -

Latest Posts

Don't Miss