ವಿಕೇಂಡ್‌ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರದಲ್ಲಿ ನಡೆಯುತ್ತಿರುವ ಕಾರ್ಯದಿಂದಾಗಿ ಈ ವ್ಯತ್ಯಯ ಉಂಟಾಗಲಿದೆ. ಮಾರತಹಳ್ಳಿ, ದೊಡ್ಡನೆಕುಂದಿ, ಇಸ್ರೋ ಕ್ಯಾಂಪಸ್, ಬಾಗ್‌ಮನೆ ಟೆಕ್ ಪಾರ್ಕ್, ಜಿಟಿಆರ್‌ಐ, ಡಬ್ಲ್ಯುಟಿಸಿ, ಇಂದಿರಾನಗರ 1-2ನೇ ಹಂತ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 80 ಅಡಿ ರಸ್ತೆ, ಸಿಎಂಎಚ್ ರಸ್ತೆ, ಜೀವನ್‌ಭೀಮನಗರ, ಗೀತಾಂಜಲಿ ಲೇಔಟ್, ಬಿಡಿಎ ಲೇಔಟ್, ಎಲ್‌ಐಸಿ ಕಾಲೋನಿ, ತಿಪ್ಪಸಂದ್ರ, ರಮೇಶ್‌ನಗರ, ಟಾಟಾ ಹೌಸಿಂಗ್, ಬಿಇಎಂಎಲ್, ಕಾಡಾ ಹೌಸಿಂಗ್, ಮಲ್ಲೇಶ್‌ಪಾಲ್, ಎಡಿಎ ಲೇಔಟ್, ಬಸವನಗರ, ಅನ್ನಸಂದ್ರಪಾಳ್ಯ, ವಿಭೂತಿಪುರ, ಜೈನ್ ಹೈಟ್ಸ್, ವಿಶ್ವಜಿತ್ ಲೇಔಟ್, ಆದರ್ಶ ವಿಲ್ಲಾ, ಕುವೆಂಪು ರಸ್ತೆ, ಕೃಷ್ಣಪ್ಪ ಗಾರ್ಡನ್, ಏರ್‌ಪೋರ್ಟ್ ರಸ್ತೆ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.
ಇದಲ್ಲದೆ, ವಾರದ ಆರಂಭದಲ್ಲಿ ಮೂರು ದಿನಗಳ ಕಾಲ ಕಾವೇರಿ ನೀರಿನ ಪೂರೈಕೆ ಸ್ಥಗಿತವಾಗಲಿದೆ. ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17ರಂದು ಒಟ್ಟು ಐದು ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರಿನ ಸರಬರಾಜು ನಿಲ್ಲಲಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ನೀರನ್ನು ಸಂಗ್ರಹಿಸಿಕೊಳ್ಳುವಂತೆ ಜಲಮಂಡಳಿ ಮನವಿ ಮಾಡಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ