- Advertisement -
ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಎಲ್ಲರೂ 2 ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಇಲ್ಲವಾದಲ್ಲಿ ಹಿಂದಿನ ಇತಿಹಾಸ ಮರುಕಳಿಸುತ್ತದೆ ಎಂದು ಹೇಳಿದ್ದಾರೆ.
ಒಮಿಕ್ರಾನ್ ವೈರಸ್ ತೆಡೆಗೆ ಕಠಿಣ ರೂಲ್ಸ್ ಜಾರಿ ಅಗತ್ಯವಿದೆ. ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಒಮಿಕ್ರಾನ್ ತಡೆಗೆ ಕಠಿಣ ರೂಲ್ಸ್ ಜಾರಿ ಮಾಡುವಂತೆ ಮನವಿ ಮಾಡಲಾಗುವುದು. ಕೆಲ ದಿನಗಳ ಹಿಂದೆ ತೆರವುಗೊಳಿಸಿದ್ದ ರೂಲ್ಸ್ ಮತ್ತೆ ಜಾರಿ ಮಾಡಲಾಗುವುದು ಎಂದು ಸುಳಿವು ಕೊಟ್ಟಿದ್ದಾರೆ.
- Advertisement -