- Advertisement -
www.karnatakatv.net: ಬೆಂಗಳೂರು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಅಂತ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ.
ಇನ್ನು ಲೋಕಸಭೆ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೂಚನೆ ನೀಡಿದ್ದ ಹಿನ್ನೆಯಲ್ಲಿ ಈ ಪ್ರಶಸ್ತಿ ಘೋಷಿಸಲಾಗಿದೆ ಅಂತ ಸ್ಪೀಕರ್ ಕಾಗೇರಿ ತಿಳಿಸಿದ್ದಾರೆ.
ಕರ್ನಾಟಕ ಟಿವಿ –ಬೆಂಗಳೂರು
- Advertisement -