ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ.
ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಗಗನಸಖಿಯರು, ಕ್ಯಾಪ್ಟನ್ ಗಳು, ಪೈಲೆಟ್ ಗಳು, ವಿಮಾನ ನಿಲ್ದಾಣ ಹಾಗೂ ವಿಮಾನದಲ್ಲಿ ನಿಯೋಜಿಸಿರುವ ಸಿಬ್ಬಂದಿಗೆ ಡಿಜಿಎಸಿ ಪ್ರತ್ಯೇಕ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು.
ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಮತ್ತು ವಿಶೇಷ ಸಂದರ್ಭದಲ್ಲಿ ಅನುಮತಿಯೊಂದಿಗೆ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ಡಿಜಿಸಿಎ ತಿಳಿಸಿದೆ.