ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರಕ್ಕೆ ಚಾಲನೆ .

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದ, ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ “ಭೈರತಿ ರಣಗಲ್” ಚಿತ್ರದ ಮುಹೂರ್ತ ಸಮಾರಂಭ ಗವಿಪುರದ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. “ಮಫ್ತಿ” ಚಿತ್ರದ ಶಿವರಾಜಕುಮಾರ್ ಅವರ ಭೈರತಿ ರಣಗಲ್ ಪಾತ್ರ ಇನ್ನು ಎಲ್ಲರ ಮನದಲ್ಲಿದೆ. ಆ ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಇದು “ಮಫ್ತಿ” ಚಿತ್ರದ ಪ್ರೀಕ್ವೆಲ್. “ಮಫ್ತಿ” ಚಿತ್ರದಲ್ಲಿ ಮಧ್ಯಾಂತರದ ನಂತರ ಈ ಪಾತ್ರ ಬರುತ್ತದೆ. … Continue reading ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಶಿವರಾಜಕುಮಾರ್ ಅಭಿನಯದ “ಭೈರತಿ ರಣಗಲ್” ಚಿತ್ರಕ್ಕೆ ಚಾಲನೆ .