Friday, December 27, 2024

Latest Posts

ಕೃಷಿ ಕಾಯ್ದೆ ವಿರೋಧಿಸಿ ಸೆ.27ರಂದು ಭಾರತ್ ಬಂದ್..!

- Advertisement -

www.karntakatv.net: ಗುಂಡ್ಲುಪೇಟೆ : ಕೇಂದ್ರ ಸರ್ಕಾರದ ಆಡಳಿತದ ವಿರುದ್ದವಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ. 27ರ ಭಾರತ್ ಬಂದ್‌ಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಬಲ ಘೋಷಿಸಿವೆ.

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27 ರಂದು ಕರೆ ಕೊಟ್ಟಿರುವ ಭಾರತ್ ಬಂದ್ ಕುರಿತಂತೆ ಪಟ್ಟಣದ ಪ್ರವಾಸಿಮಂದಿರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಕಡಬೂರು ಮಂಜುನಾಥ್ ಮಾತನಾಡಿ, ಸೆ. 27 ಕ್ಕೆ ರೈತ ವಿರೋಧಿ ಕೃಷಿ ಕಾಯ್ದೆಗಳಿಗೆ ರಾಷ್ಟ್ರಪತಿಗಳು ಸಹಿ ಮಾಡಿ 1 ವರ್ಷ ಕಳೆದಿದೆ ಈ ನಿಟ್ಟಿನಲ್ಲಿ ಅದೇ ದಿನ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ಬಂದ್ ಆಚರಿಸಲಾಗುವುದು ಆದುದರಿಂದ ಪಟ್ಟಣದ ವರ್ತಕರು, ಹೋಟೆಲ್ ಮಾಲೀಕರು, ಆಟೋ ಚಾಲಕರು ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಸೆ.27 ರ ಬಂದ್ ಕುರಿತಂತೆ ಮಾತನಾಡಿ, ದೇಶಾದಾದ್ಯಂತ ಇಂಧನ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಹಾಗಾಗಿ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಕರೆ ನೀಡಿರುವ ಬಗ್ಗೆ ಎಲ್ಲಾ ಪ್ರಗತಿಪರ ಸಂಘಟನೆಗಳ ಸಂಪೂರ್ಣ ಬೆಂಬಲವಿದೆ ಎಂದರು. ರೈತ ಸಂಘ ಸದಸ್ಯರು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಹಾಜರಿದ್ದರು.

ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ

- Advertisement -

Latest Posts

Don't Miss