ಹಲವು ಕಾಂಗ್ರೆಸ್ಸಿಗರು ಬಿಜೆಪಿ ಸೇರಿದ್ದೇ ಈ ಕಾರಣಕ್ಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಷ್ಟು ದಿನ ಚುನಾವಣೆ ಪ್ರಚಾರಕ್ಕಾಗಿ, ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಿದೆ.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಈ ಬಗ್ಗೆ ಸಮಾರಂಭ ನಡೆಸಲಾಗಿದ್ದು, ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಲ್ಲದೇ, ಹಲವು ಸಂಸ್ಥೆಗಳ ದುರ್ಬಳಕೆಯಾಗುತ್ತಿರುವ ಕಾರಣಕ್ಕೆ, ನಾವು ಭಾರತ್ ಜೋಡೋ ಯಾಾತ್ರೆ ಮಾಡಬೇಕಾಯಿತು ಎಂದು ರಾಾಹುಲ್‌ ಗಾಂಧಿ ಹೇಳಿದ್ದಾರೆ.

ಅಲ್ಲದೇ, ಈ ಯಾತ್ರೆ ಬರೀ ಕಾಂಗ್ರೆಸ್ ಪಕ್ಷವಷ್ಟೇ ಮಾಡಿದ್ದಲ್ಲ. ಬದಲಾಗಿ ಬಿಜೆಪಿಿಯ ಎಲ್ಲ ವಿರೋಧ ಪಕ್ಷಗಳು ನಮಗೆ ಹಲವು ರಾಜ್ಯಗಳಲ್ಲಿ ಸಾಥ್ ಕೊಟ್ಟಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದೆ. ನಾವು ಓರ್ವ ವ್ಯಕ್ತಿಯ ವಿರುದ್ಧ ಹೋರಾಡುತ್ತಿಲ್ಲ. ಬದಲಾಗಿ ಒಂದು ಶಕ್ತಿಯ ವಿರುದ್ಧ ಹೋರಾಡುತ್ತಿದ್ದೇವೆ. ಮೋದಿಯವರು ಮುಖ ಬರೀ ಮುಖವಾಡವಾಗಿದೆ ಎಂದು ಮೋದಿ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ, ಹಲವರು ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದಕ್ಕೆಲ್ಲ, ಅವರೊಡ್ಡಿದ ಬೆದರಿಕೆಯೇ ಕಾರಣವಾಗಿದೆ. ತಮ್ಮ ಪಕ್ಷಕ್ಕೆ ಬರದಿದ್ದಲ್ಲಿ, ಜೈಲಿಗೆ ಕಳಿಸುವುದಾಗಿ ಬೆದರಿಕೆ ಒಡ್ಡಿದ್ದರಿಂದಲೇ, ಹೆದರಿ ಹಲವು ಕಾಂಗ್ರೆಸ್ಸಿಗರು ಬಿಜೆಪಿ ಸೇರಿದ್ದಾರೆಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್‌ಷಾರನ್ನು ಭೇಟಿಯಾದ ಗೌಡರ ಕುಟುಂಬ

ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ: ಬಿ.ಎಸ್.ಯಡಿಯೂರಪ್ಪ

ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

About The Author