Political News: ಬಿಜೆಪಿ ಭೀಷ್ಮ ಲಾಲಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿಯನ್ನು, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಬರೆದುಕೊಂಡಿರುವ ಪ್ರಧಾನಿ ಮೋದಿ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಲು ನನಗೆ ಬಹಳ ಸಂತೋಷವಾಗುತ್ತಿದೆ.
ನಾನು ಅವರೊಂದಿಗೆ ಮಾತನಾಡಿ, ನೀವು ಈ ಗೌರವಕ್ಕೆ ಪಾತ್ರರಾಗಿದ್ದೀರಿ ಎಂದು ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಲಾಲ್‌ಕೃಷ್ಣ ಅಡ್ವಾಣಿ ಕೂಡ ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣೀಯವಾಗಿದೆ. ತಳಮಟ್ಟದಿಂದ ಹಿಡಿದು ಭಾರತದ ಉಪಪ್ರಧಾನಿಯಾಗಿ ಅಡ್ವಾಣಿಯವರು ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಸಚಿವರು, ಗೃಹಮಂತ್ರಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ. ಅವರ ಸಂಸದೀಯ ಮಧ್ಯಸ್ತಿಕೆಗಳು ಆದರ್ಶಪ್ರಾಯವಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜಿಯವರ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ, ರಾಜಕೀಯ ನೀತಿಶಾಸ್ತ್ರದಲ್ಲಿ ಅನುಕರಣೀಯ ಮಾನದಂಡವನ್ನು ಹೊಂದಿಸುತ್ತದೆ. ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಿದ್ದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
I am very happy to share that Shri LK Advani Ji will be conferred the Bharat Ratna. I also spoke to him and congratulated him on being conferred this honour. One of the most respected statesmen of our times, his contribution to the development of India is monumental. His is a… pic.twitter.com/Ya78qjJbPK
— Narendra Modi (@narendramodi) February 3, 2024
‘ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ’
ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ