Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು,ಡಾ. ಗೋಪಾಲಕೃಷ್ಣ ವರ್ಗಾವಣೆ ನಂತರ ತೆರವು ಆಗಿದ್ದ ಪಾಲಿಕೆ ಆಯುಕ್ತರ ಸ್ಥಾನಕ್ಕೆ ಭರತ್ ಎಸ್ ಅವರನ್ನು ನೇಮಕ ಮಾಡಿದ್ದು, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೂಡ ಭರತ್ ಅವರು ಸೇವೆ ಸಲ್ಲಿಸಿದ್ದಾರೆ.
ಇನ್ನೂ ಬಹುತೇಕ ಅಧಿಕಾರಿಗಳ ಸ್ಥಾನಗಳ ಭರ್ತಿ ಮಾಡುವ ಬಗ್ಗೆ ಸರ್ಕಾರ ಗಮನ ಹರಿಸುವ ಮೂಲಕ ಪಾಲಿಕೆಯ ಅಧಿಕಾರಿಗಳ ಕೊರತೆ ಕಡಿಮೆ ಮಾಡಬೇಕಿದೆ.
ಕುಮಾರಸ್ವಾಮಿಯಿಂದ ಸಿದ್ದರಾಮಯ್ಯನವರು ಕಲಿಯುವ ಅವಶ್ಯಕತೆಯಿಲ್ಲ- ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.