ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಮಧ್ಯಪ್ರದೇಶ ,ಮೂಲಕ ಈಗ ರಾಜಸ್ಥಾನದಲ್ಲಿ ನಡೆಯುತ್ತಿದೆ. ಇನ್ನು ನೂರನೇ ದಿನದ ಯಾತ್ರೆಯು ರಾಜಸ್ಥಾನದ ದೌಸಾದಿಂದ ಆರಂಭವಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಪಕ್ಷದ ಹಲವಾರು ನಾಯಕರು ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಭಾಗಿಯಾಗಿದ್ದಾರೆ.
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ವಿಷ್ಣುವಿನ ಅನುಗ್ರಹಕ್ಕಾಗಿ ಧನುರ್ಮಾಸದಲ್ಲಿ ಈ ನಿಯಮಗಳನ್ನೂ ಪಾಲಿಸಿ ನಿಷ್ಠೆಯಿಂದ ಪೂಜಿಸಿ..!