ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ನಿಧನ

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ ಯಾತ್ರಗಳಿಗೂ ಇದು ದುಃಖವನ್ನುಂಟು ಮಾಡಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ತಿಳಿಸಿದ್ದಾರೆ.ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿದ್ದಾರೆ.

About The Author