Wednesday, January 22, 2025

Latest Posts

ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಪ್ರಮಾಣ ವಚನ

- Advertisement -

18ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಿ 7 ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಅವರನ್ನು ನೇಮಿಸಿದ್ದಕ್ಕೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.
8 ಬಾರಿ ಲೋಕಸಭಾ ಸದಸ್ಯರಾಗಿರುವ ಅತ್ಯಂತ ಹಿರಿಯ ಸದಸ್ಯ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಡೆಗಣಿಸಿ ಭರ್ತೃಹರಿ ಅವರನ್ನು ಹಂಗಾಮಿ ಸ್ಪೀಕರ್ ಮಾಡಿರುವುದು ಸರಿಯಲ್ಲ ಎಂದು ವಿಪಕ್ಷಗಳು ಅರೋಪಿಸಿವೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಸುರೇಶ್ ಅವರನ್ನು ದೂರವಿಡಲಾಗಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

- Advertisement -

Latest Posts

Don't Miss