Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ.
ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಬಿಜೆಪಿ ವಿರೋಧದ ನಡುವೆಯೂ ಜೆಡಿಎಸ್‌ನಿಂದ ಭರ್ಜರಿ ಕ್ಯಾಂಪೇನ್ ಶುರುವಾಗಿದೆ.
ಈವರೆಗೆ ಪ್ರಜ್ವಲ್ ರೇವಣ್ಣ ಎನ್‌ಡಿಎ ಅಭ್ಯರ್ಥಿ ಎಂದು ಅಧಿಕೃತವಾಗಿ ಹೇಳದಿದ್ದರೂ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್ ಅವರೇ ಸ್ಪರ್ಧಿಸುತ್ತಾರೆಂದು ಹೇಳಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ.
ಭಾರತೀಯ ವಿದ್ಯಾರ್ಥಿ ಯುಎಸ್‌ನಲ್ಲಿ ಶವವಾಗಿ ಪತ್ತೆ: 2024ರ 9ನೇ ಕೊ*ಲೆ ಕೇಸ್ ಇದು..
ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?



