Sunday, September 8, 2024

Latest Posts

‘ಸಾಯೋಕೆ ನನ್ನ ₹1.5 ಕೋಟಿ ಕಾರೇ ಆಗಬೇಕಿತ್ತಾ..? ಸುಟ್ಟು ಹಾಕ್ರೋ ಗಾಡಿನಾ’

- Advertisement -

Political News: ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್‌ ನಾಯಕ ಭವಾನಿ ರೇವಣ್ಣ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವ್ಯಾಚ ಶಬ್ಧಗಳಲ್ಲಿ ಬೈದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಭಾನುವಾರ ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ತಪ್ಪಾದ ಮಾರ್ಗದಲ್ಲಿ ಬಂದು ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ ತುಸು ಹಾನಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರಿನಿಂದ ಇಳಿದ ಭವಾನಿ ರೇವಣ್ಣ ಅವರು ಬೈಕ್‌ ಸವಾರನನ್ನು ಬಾಯಿಗೆ ಬಂದಂತೆ ಬೈದಿದ್ದಾರೆ.

ಸುಟ್ರು ಹಾಕ್ರೋ ಈ ಗಾಡಿನ
ಭವಾನಿ ಅವರು ಕಾರಿನಿಂದ ಕೆಳಗಿಳಿದು ಬಂದು ಬೈಕ್ ಸವಾರ ಆರೋಗ್ಯ ವಿಚಾರಿಸಲಿಲ್ಲ. ಹಿಗ್ಗಾಮುಗ್ಗಾ ಬೈದದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಾಯೋಕೆ 1.5 ಕೋಟಿ ಕಾರೇ ಆಗಬೇಕಿತ್ತಾ, ಸುಟ್ಟು ಹಾಕ್ರೋ ಈ ಗಾಡಿನ ಎಂದು ಬೈಕ್‌ ಸವಾರನಿಗೆ ತರಾಟೆಗೆ ತೆಗೆದುಕೊಂಡರು.

ಕೊಡ್ತೀಯಾ 50 ಲಕ್ಷ ರಿಪೇರಿಗೆ..?
ವಾಹನದ ಮುಂಭಾಗ ಡ್ಯಾಮೇಜ್‌ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್‌ ಸವಾರನ ಮೊಬೈಲ್‌ ಕಸಿದುಕೊಂಡು ಬೈಕ್‌ ಕೀ ಕಿತ್ತುಕೊಂಡರು. ” ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್‌ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವನು (ಬೈಕ್‌ ಸವಾರ) ಸತ್ತೋಯ್ತಾನೆ ಅಂತ ಅವನ ಬಗ್ಗೆ ಯೋಚೆ ಮಾಡ್ತಾ ಇದ್ದೀಯಲ್ಲಾ, ಒಂದೂವರೆ ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕಟ್ಟಿಕೊಡ್ತಾರೆ ?’ ಎಂದೂ ಸ್ಥಳೀಯರ ವಿರುದ್ಧ ಭವಾನಿ ರೇವಣ್ಣ ಕೆಂಡಾಮಂಡಲವಾದರು.

ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು
‘ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು.

ಬೈಕ್‌ ಸೀಜ್‌ ಮಾಡಿಸು
ಇದು ಯಾವ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುತ್ತೆ. ಗಾಡಿ ಸೀಜ್‌ ಮಾಡಿಸು. ಈ ಗ್ರಾಮ ಎಸ್‌ಐ ಬರೋಕೆ ಹೇಳಿ ಎಂದು ಭವಾನಿ ರೇವಣ್ಣ ಅವರೇ ಬೈಕ್‌ ಸವಾರ ಮತ್ತು ಹಿಂಬದಿ ಸವಾರನ ಫೋಟೋವನ್ನು ಕ್ಲಿಕ್ಕಿಸುತ್ತಿರುವ ವಿಡಿಯೋದಲ್ಲಿ ರೆಕಾರ್ಡ್‌ ಆಗಿದೆ.

ಪ್ರಕರಣ ದಾಖಲು
ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬೈಕ್‌ ಸವಾರ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಯಶ್: ಡಿ.8ಕ್ಕೆ ಹೊಸ ಸಿನಿಮಾ ಟೈಟಲ್ ಘೋಷಣೆ

- Advertisement -

Latest Posts

Don't Miss