Wednesday, October 22, 2025

Latest Posts

ಭೋವಿ ನಿಗಮ ಅಧ್ಯಕ್ಷ ಎಸ್ ರವಿಕುಮಾರ್ ರಾಜೀನಾಮೆ!

- Advertisement -

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರು ಕೊನೆಗೂ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಉಂಟಾದ ವಿವಾದ ಹಾಗೂ ರಾಜಕೀಯ ಒತ್ತಡದ ನಡುವೆಯೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಭೋವಿ ಸಮುದಾಯದ ಭೂ ರಹಿತ ಕಾರ್ಮಿಕ ಮಹಿಳೆಯರಿಗೆ ಭೂ ಒಡೆತನ ಯೋಜನೆಯಡಿ ಅನುದಾನ ನೀಡುವುದಾಗಿದೆ. ಈ ಯೋಜನೆಯಡಿಯಲ್ಲಿ ಸುಮಾರು ₹15 ಕೋಟಿ ವೆಚ್ಚದಲ್ಲಿ 60 ಎಕರೆ ಭೂಮಿಯನ್ನು ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುತ್ತಿತ್ತು. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ₹25 ಲಕ್ಷದವರೆಗೆ ಅನುದಾನ ಅಂದ್ರೆ 50% ಸಬ್ಸಿಡಿ ಮತ್ತು 50% ಸಾಲ ನೀಡಲಾಗುತ್ತಿತ್ತು. ಆದರೆ ಈ ಮೊತ್ತದ ಶೇ.40 ರಿಂದ ಶೇ.60 ರಷ್ಟು ತನಕ ಕಮಿಷನ್‌ ಅನ್ನು ರವಿಕುಮಾರ್ ಬೇಡಿಕೆ ಇಟ್ಟಿದ್ದಾರೆಯೆಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ಸಂಬಂಧ ವಿಡಿಯೋ ಮತ್ತು ಆಡಿಯೋ ಸಾಕ್ಷ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ವಿಡಿಯೋದಲ್ಲಿ ರವಿಕುಮಾರ್ ಮಧ್ಯವರ್ತಿಗಳೊಂದಿಗೆ ಕಮಿಷನ್ ಕುರಿತ ಸಂಭಾಷಣೆ ನಡೆಸುತ್ತಿರುವಂತೆ ಕಾಣುತ್ತಿದ್ದರೆಂದು ತಿಳಿಸಲಾಗಿದೆ.

ಈ ಆರೋಪಗಳ ಕುರಿತು ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವೀಡಿಯೋದಲ್ಲಿ ಕೇಳಿಬರುವ ಧ್ವನಿ ನನ್ನದು ಅಲ್ಲ. ಇದು ಎಐ ತಂತ್ರಜ್ಞಾನ ಬಳಸಿ ತಿರಿಚಿದ್ದಾರೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ, ಯಾರಿಗೂ ಹಣ ಕೊಟ್ಟಿಲ್ಲ. ವೀಡಿಯೋವನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದರೆ ಸತ್ಯ ಬಹಿರಂಗವಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಜೊತೆಗೆ, ಈ ಹಿನ್ನಲೆಯಲ್ಲಿ ನಿಗಮದ ಕೆಲ ಅಧಿಕಾರಿಗಳ ಪಾತ್ರವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಈ ಆರೋಪಗಳ ಪೈಪೋಟಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ನಾಯಕರು ತೀವ್ರ ಟೀಕೆಗಳನ್ನು ಮುಂದುವರಿಸಿದ್ದರು. ಇದೇ ಸಂದರ್ಭದಲ್ಲಿ ರಾಜಕೀಯ ಒತ್ತಡ ಹೆಚ್ಚಾಗಿದೆ. ಕೊನೆಗೂ ರವಿಕುಮಾರ್ ತಮ್ಮ ಸ್ಥಾನದಿಂದ ಪದವಿಯ ರಾಜೀನಾಮೆ ಸಲ್ಲಿಸಿ, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss