Saturday, May 18, 2024

Latest Posts

ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

- Advertisement -

State News:

ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ.

ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ ನಿರುದ್ಯೋಗ ಸಮಸ್ಯೆ ಪರಿಹಾರ, ರೈತರಿಗೆ ಗೌರವಯುತ ಆದಾಯ ಸಿಗುವಂತೆ ಮಾಡುವುದು, ರಾಜ್ಯದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ, ಜನ ಸಾಮಾನ್ಯರ ಬದುಕು ನರಕ ಮಾಡಿರುವ ಬೆಲೆ ಏರಿಕೆ ಜತೆಗೆ ಜನರ ಆದಾಯ ಪಾತಾಳಕ್ಕೆ ಕುಸಿದು, ವೆಚ್ಚ ಆಕಾಶಕ್ಕೆ ಹೋಗುತ್ತಿರುವುದನ್ನು ತಡೆಯುವುದೇ ಆಗಿದೆ. ಈ ಎಲ್ಲ ಜನಪರ ಉದ್ದೇಶಗಳೊಂದಿಗೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ಕರ್ನಾಟಕ ಕಾಂಗ್ರೆಸ್ ಸಮಿತಿ ಪರವಾಗಿ ರಾಹುಲ್ ಗಾಂಧಿ ಹಾಗೂ ಅವರ ಜತೆಗೆ ಹೆಜ್ಜೆ ಹಾಕುವ ಎಲ್ಲ ಯಾತ್ರಿಗಳಿಗೆ ಕೋಟಿ ಧನ್ಯವಾದಗಳು.

ಇತಿಹಾಸವನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಯಾವತ್ತೂ ಅಧಿಕಾರದ ಬಗ್ಗೆ ಯೋಚಿಸುವುದಿಲ್ಲ, ಜನಸಾಮಾನ್ಯರ ಬದುಕಿನ ಬಗ್ಗೆ ಯೋಚಿಸುತ್ತದೆ. ನಮ್ಮ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರಿಗೆ ಮೂರು ಬಾರಿ ದೇಶದ ಪ್ರಧಾನ ಮಂತ್ರಿ ಆಗುವ ಅವಕಾಶವಿತ್ತು, ರಾಹುಲ್ ಗಾಂಧಿ ಅವರಿಗೆ ಎರಡು ಬಾರಿ ಅವಕಾಶವಿತ್ತು. ಆದರೆ ಅವರು ದೇಶಕ್ಕಾಗಿ ಅಧಿಕಾರವನ್ನು ತ್ಯಾಗ ಮಾಡಿದರು. ಇಂದು ಅವರು ಬರೀ ನಾಯಕರಾಗಿ ಹೆಜ್ಜೆ ಹಾಕುತ್ತಿಲ್ಲ, ನಿಮ್ಮ ಜತೆ ಸಾಮಾನ್ಯ ಕಾರ್ಯಕರ್ತರಂತೆ ಹೆಜ್ಜೆ ಹಾಕಿ ನಿಮ್ಮೆಲ್ಲರನ್ನು ಒಟ್ಟಿಗೆ ಕೊಂಡೊಯ್ಯುತ್ತಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತೀಯರ ಮನದಲ್ಲಿ ಅಸೂಯೆ, ದ್ವೇಷ ಹೆಚ್ಚಿಸಿದ್ದು, ಇದನ್ನು ತೊಡೆದು ಹಾಕಬೇಕು, ಎಲ್ಲರನ್ನು ಒಗ್ಗೂಡಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ನಮ್ಮನ್ನು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಹತ್ತಿಕ್ಕಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ನಾವು ಯಾವುದಕ್ಕೂ ಹೆದರುವುದಿಲ್ಲ. ನಿಮ್ಮ ಬದುಕು ರಕ್ಷಿಸಿ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಅವಿರತ ಶ್ರಮಿಸಲಿದೆ.

ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ…!

ಪ್ರವೀಣ್ ನೆಟ್ಟಾರ್, ಶರತ್ ಮಡಿವಾಳ ಹತ್ಯೆಗೆ ನಡೆದಿತ್ತು ಈ ಹಾಲ್ ನಲ್ಲಿ ಟ್ರೈನಿಂಗ್..!

ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ..!

- Advertisement -

Latest Posts

Don't Miss