Bidar Crime News: ಎದುರು ಮನೆಯ ಯುವತಿ ಜತೆ ಪತಿಯ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪತ್ನಿಯ ಹ*ತ್ಯೆ

Bidar News: ಬೀದರ್: ಎದುರು ಮನೆ ಹುಡುಗಿ ಜತೆಗೆ ಪತಿ ಪ್ರೀತಿಯಲ್ಲಿ ಬಿದ್ದಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯನ್ನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್‌ನಲ್ಲಿ ನಡೆದಿದೆ.

ಬೀದರ್‌ನ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ ಪತ್ನಿಯನ್ನು ತವರುಮನೆಗೆ ಕರೆದ“ಯ್ಯುತ್ತೇನೆ ಬಾ ಎಂದು ಹೇಳಿ, ಅರಣ್ಯ ಪ್ರದೇಶದಲ್ಲಿ ಪತ್ನಿಯ ತಲೆಗೆ ಕಬ್ಬಿಣದ ರಾಡ್‌ನಿಂದ ಬಡಿದು ಹತ್ಯೆ ಮಾಡಿದ್ದಾನೆ. ಬಳಿಕ ಅಪಘಾತ ಎಂದು ಎಲ್ಲರನ್ನೂ ನಂಬಿಸಲು ಪ್ರಯತ್ನಿಸಿದ್ದಾನೆ.

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿಯಾಗಿದ್ದು, ಭಗವತ್ ಜ್ಞಾನೇಶ್ವರ ಪತ್ನಿಯನ್ನು ಹತ್ಯೆ ಮಾಡಿದವನಾಗಿದ್ದಾನೆ. ಆಕೆಯ ಮೇಲೆ ಹಲ್ಲೆ ಮಾಡಿ, ಅಪಘಾತವಾಯಿತೆಂದು ಆಸ್ಪತ್ರೆಗೆ ತಂದು ಸೇರಿಸಿದ್ದಾನೆ. ಆದರೆ ಚಿಕಿತ್ಸೆ ಫಲಿಸದೇ ಪತ್ನಿ ಸಾವನ್ನಪ್ಪಿದ್ದಾಳೆ.

2 ವರ್ಷದ ಹಿಂದೆ ಇವರಿಬ್ಬರು ಮದುವೆಯಾಗಿದ್ದು, ಇದೀಗ ಪತಿಯ ಕ್ರೂರ ಮನಸ್ಥಿತಿಗೆ ಪತ್ನಿ ಸಂಜನಾ ಬಲಿಯಾಗಿದ್ದಾಳೆ. ಈ ಕುರಿತು ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ.

About The Author