Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ.

ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು.

ಪೌರಾಡಳಿತ ಸಚಿವ ರಹೀಂ ಖಾನ್, ಮಹಾನಗರ ಪಾಲಿಕೆ ಮೇಯರ್ ಮಹಮ್ಮದ್ ಗೌಸ್ ಸೇರಿ ಅನೇಕ ಗಣ್ಯರು ಪ್ರಾರ್ಥನೆಯಲ್ಲಿ ಭಾಗಿಯಾಗಿ, ಶಾಂತಿ-ಸೌಹಾರ್ದತೆಯಿಂದ ರಂಜಾನ್ ಹಬ್ಬವನ್ನು ಆಚರಿಸಿದ್ದಾರೆ.

About The Author