Bidar News: ಮಳೆ ಬಂತೆಂದು ಮರದ ಕೆಳಗೆ ನಿಂತ ಯುವಕ ಸಿಡಿಲು ಬಡಿದು ಸಾ*!

Bidar News: ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರದಂದು (ಮಾ.31) ನಡೆದಿದೆ.

ರಾಹುಲ್ ರಮೇಶ ಭಾಸ್ಕರೆ (25) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ಸಂಬಂಧ ಗ್ರಾಮದ ಹೊರವಲಯಕ್ಕೆ ಹೋಗಿದ್ದರು. ಮಳೆ ಬರುತ್ತಿರುವುದು ಕಂಡು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ಔರಾದ್ ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

About The Author