Bidar News: ಬೀದರ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪೊಲೀಸರು

Bidar News: ಬೀದರ್: ಬೀದರ್ ಪೋಲೀಸರು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ್ದಾರೆ. ಸ್ಥಳೀಯರು ಪೋಲೀಸರು ಕಾರ್ಯಾಚರಣೆ ನಡೆಸಿ, ನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮವಾಗಿ ಮಾರಲು ತಂದಿದ್ದ 6.73 ಲಕ್ಷ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.

ಬೀದರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ, ಈ ಬಗ್ಗೆ ಮಾಹಿತಿ ನೀಡಿರುವ, ಎಸ್‌ಪಿ ಪ್ರದೀಪ್ ಗುಂಟಿ, ಬೀದರ್ ಮೂಲದ ಹೊಟೇಲ್ ವ್ಯಾಪಾರ ಮಾಡುತ್ತಿದ್ದ ಅಮನ್‌ಜೀತ್ & ವೆಂಕಟೇಶ್ ಎಂಬಿಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಇವರಿಬ್ಬರು ಪಕ್ಕದ ರಾಜ್ಯ ಮಹಾರಾಷ್ಟ್ರದ ನಾಂದೇಡ್‌ನವರಾಗಿದ್ದು, ಅಲ್ಲಿಂದ ಕುಖ್ಯಾತ ವ್ಯಕ್ತಿಯಿಂದ ಶಸ್ತ್ರಾಸ್ತ್ರ ಖರೀದಿಸಿ ತಂದು, ಬೀದರ್ನಲ್ಲಿ ಕಡಿಮೆ ಬೆಲೆಗೆ ಮಾರುತ್ತಿದ್ದರು ಎಂದು ಎಸ್ಪಿ ಹೇಳಿದ್ದಾರೆ.

ಬೀದರ್‌ನ ರಿಂಗ್‌ರೋಡ್‌ನಲ್ಲಿ ಶಸ್ತ್ರಾಸ್ತ್ರಗಳನ್ನು ಮಾರುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿ, ಎಲ್ಲ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.  ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

3.50 ಲಕ್ಷ ಮೌಲ್ಯದ 5 ನಾಡ ಪಿಸ್ತೂಲ್, 2.60 ಲಕ್ಷ ಮೌಲದ್ಯ 26 ಜೀವಂತ ಮದ್ದುಗುಂಡುಗಳ 10 ಖಾಲಿ ಗುಂಡುಗಳು, 13 ಸಾವಿರ ಮೌಲ್ಯದ 5 ತಲವಾರುಗಳು ಸೇರಿ ಒಂದು ಬೈಕ್ ಸೇರಿ 6.73 ಸಾವಿರ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಪ್ರದೀಪ್ ಹೇಳಿದ್ದಾರೆ. ಬೀದರ್ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

About The Author