Monday, October 27, 2025

Latest Posts

25 ದಿನದಲ್ಲೇ ‘ಮಹಾಕ್ರಾಂತಿ’ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬದಲಾವಣೆ ಫಿಕ್ಸ್!

- Advertisement -

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ ಖಚಿತವಾಗಿದೆ.

2023ರ ಮೇ 20ರಂದು ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ್ದರು. ಈಗ ಇವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನವೆಂಬರ್ 20ಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ಮರುರಚನೆ ಕುರಿತು ಸ್ಪಷ್ಟ ನಿರ್ಧಾರ ಆಗುವ ಸಾಧ್ಯತೆ ಇದೆ.

ಸಚಿವ ಸಂಪುಟ ಬದಲಾವಣೆ ಕುರಿತಾಗಿ ಹೈಕಮಾಂಡ್ ಈಗಾಗಲೇ ಸೂಚನೆ ನೀಡಿದೆ. ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಪೂರ್ಣವಾದ ಬಳಿಕ ಬದಲಾವಣೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿರುವುದು ಈ ಊಹೆಗಳಿಗೆ ಮತ್ತಷ್ಟು ಬಲ ನೀಡಿದೆ.

ಸಂಪುಟ ಬದಲಾವಣೆಯೋ ಅಥವಾ ನಾಯಕತ್ವ ಬದಲಾವಣೆಯೋ? ಅನ್ನೋದನ್ನ ನೋಡೋದಾದ್ರೆ ರಾಜ್ಯದಲ್ಲಿ ಈ ಸಮಯದಲ್ಲಿ ಎರಡು ಪ್ರಮುಖ ಚರ್ಚೆಗಳು ನಡೆಯುತ್ತಿವೆ. ಒಂದು – ಮುಖ್ಯಮಂತ್ರಿ ಸ್ಥಾನ ಬದಲಾಗಬಹುದು ಎನ್ನುವ ಚರ್ಚೆ. ಮತ್ತೊಂದು – ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆ ನಡೆಯಲಿದೆ ಎನ್ನುವ ಅಭಿಪ್ರಾಯ.

ಕಿತ್ತೂರಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣ ಭೈರೇಗೌಡ ಇಬ್ಬರೂ ಸಂಪುಟ ಬದಲಾವಣೆ ಕುರಿತಾಗಿ ಸ್ಪಷ್ಟವಾಗಿ ಮಾತನಾಡಿದ್ದು, ವಿಷಯ ಈಗ ರಹಸ್ಯವಾಗಿ ಉಳಿದಿಲ್ಲ. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ಮೂರು ದಿನಗಳ ಕಾಲ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಲಿದ್ದು, ಅಲ್ಲಿ ಸಂಪುಟ ಬದಲಾವಣೆ ಕುರಿತು ಅಂತಿಮ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಆದರೆ ನಾಯಕತ್ವ ಬದಲಾವಣೆ ವಿಷಯದಲ್ಲಿ ಇನ್ನೂ ಸ್ಪಷ್ಟತೆ ಬರಬೇಕಿದೆ. ಈಗ ಸರ್ಕಾರ ತನ್ನ ಮುಂದಿನ ಹಂತಕ್ಕೆ ಕಾಲಿಡುತ್ತಿದ್ದು, ಮುಂದಿನ ಎರಡೂವರೆ ವರ್ಷಗಳು 2028ರ ಚುನಾವಣೆಯತ್ತ ರಾಜ್ಯ ರಾಜಕೀಯದ ಭವಿಷ್ಯ ನಿರ್ಧರಿಸುವ ಮಹತ್ವದ ಅವಧಿಯಾಗಲಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss