ಮುಂಬೈ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತಂತೆ ಆರ್ ಎಸ್ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
2017ರಲ್ಲಿ ರಾಜ್ಯದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಆರ್ ಎಸ್ಎಸ್ ನವರು ಗೌರಿ ಲಂಕೇಶ್ ರನ್ನು ಹತ್ಯೆಗೈದಿದ್ದಾರೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದರು.ಈ ಕುರಿತಂತೆ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ಎಸ್ ಕಾರ್ಯಕರ್ತ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕಳೆದ ಫೆಬ್ರವರಿ ತಿಂಗಳಿನಲ್ಲಿ ರಾಹುಲ್ ಗಾಂಧಿಗೆ ಸಮನ್ಸ್ ಕೂಡ ಜಾರಿಯಾಗಿತ್ತು.
ಇನ್ನು ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಮುಂಬೈನ ಸಿವ್ರೀ ಮ್ಯಾಜಿಸ್ಟ್ರೇಟ್ ಕೋರ್ಟ್ ರಾಹುಲ್ ಗಾಂಧಿ ತಪ್ಪಿತಸ್ಥರಲ್ಲ ಅಂತ ತೀರ್ಪು ನೀಡಿದೆ. ಹೀಗಾಗಿ ರಾಹುಲ್ ಗಾಂಧಿ ಮಾನನಷ್ಟ ಪ್ರಕರಣದಿಂದ ಪಾರಾಗಿದ್ದು ಬಿಗ್ ರಿಲೀಫ್ ಸಿಕ್ಕಿದೆ.
ಇವರಲ್ಲಿ ಯಾರ ಹೆಗಲೇರಲಿದೆ ಸಾಡೇಸಾತಿ..? ಮಿಸ್ ಮಾಡದೇ ಈ ವಿಡಿಯೋ ನೋಡಿ