Political News: ಚೆನ್ನಪಟ್ಟಣದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಈ ಮೊದಲು ಜೆಡಿಎಸ್ ಕಾರ್ಯಕರ್ತರನ್ನು, ಸಿ.ಪಿ.ಯೋಗೇಶ್ವರ್ ಅಭಿಮಾನಿಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು, ಜೆಡಿಎಸ್‌ಗೆ ಶಾಕ್ ಕೊಟ್ಟಿದ್ದರು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್‌ನ ಪ್ರಮುಖ ಕಾರ್ಯಕರ್ತೆ, ಸಿದ್ದರಾಮಯ್ಯ ಆಪ್ತ ಬಣದ ನಾಯಕಿಯನ್ನೇ ಜೆಡಿಎಸ್‌ಗೆ ಸೇರಿಸಿಕೊಂಡು, ಸಿಎಂ ಸಿದ್ದರಾಮಯ್ಯ ಗೆ ಶಾಕ್ ನೀಡಿದ್ದಾರೆ.
ಕಾಂಗ್ರೆಸ್ ನಾಯಕಿ, ನಗರಸಭೆ ಮಾಜಿ ಸದಸ್ಯೆ ಗೀತಾ ಶಿವರಾಮ್ ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದು, ಇದರಿಂದ ಕಾಂಗ್ರೆಸ್‌ಗೆ ದೊಡ್ಡ ಪೆಟ್ಟೇ ಬಿದ್ದಿದೆ ಎನ್ನಬಹುದು.
ಇನ್ನು ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ದೀಪಾವಳಿಗೆ ತಂಗಿ ಮನೆಗೆ ಬಂದಿದ್ದಾಳೆ. ಆಕೆಯನ್ನು ಸ್ವಾಗತಿಸುತ್ತೇನೆ ಎಂದು ಗೀತಾ ಶಿವರಾಮ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಅಲ್ಲದೇ ಚನ್ನಪಟ್ಟಣದಲ್ಲಿ ನಿಖಿಲ್ ಟ್ರೆಂಡ್ ಇದೆ. ಕುಮಾರಸ್ವಾಮಿ ಪರವಾಗಿ ಜನರಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣದ ಸಲುವಾಗಿ ಏನೂ ಮಾಡಿಲ್ಲವೆನ್ನುತ್ತಾರೆ. ಆದರೆ ನಾನು ಈ ಕ್ಷೇತ್ರಕ್ಕೆ ಏನು ಮಾಡಿದ್ದೇನೆ ಎಂದು ಕ್ಷೇತ್ರದ ಜನರಿಗೆ ಗೊತ್ತು. ನನಗೆ ಕಾಂಗ್ರೆಸ್ ಸರ್ಟಿಫಿಕೇಟ್ ಕೊಡಬೇಕಾಗಿಲ್ಲವೆಂದರು.