Political News : ರೀಲ್ಸ್ ಹುಚ್ಚಿಗೆ ಬಿದ್ದು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬಿಗ್ ಬಾಸ್ 11ರ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರ ವಿರುದ್ಧ ಬಸವೇಶ್ವರ ನಗರದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇನ್ನೂ ಬಸವೇಶ್ವರದ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಈ ಇಬ್ಬರೂ ಕೈಯಲ್ಲಿ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಧರಿಸಿ ನಟ ದರ್ಶನ್ ಅವರ ಅಭಿನಯದ ಮೆಜೆಸ್ಟಿಕ್ ಚಲನಚಿತ್ರದ ಹಾಡಿಗೆ ಸ್ಲೋ-ಮೋಷನ್ ನಡಿಗೆ ಮಾಡಿದ್ದರು. ಇವರಿಬ್ಬರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗಿತ್ತು. ಅಲ್ಲದೆ ಇದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕಂಟೆಂಟ್ ಹೊಂದಿತ್ತು. ಇದನ್ನು ನೋಡಿದವರು ಸಹಜವಾಗಿಯೇ ಆತಂಕಕ್ಕೆ ಒಳಗಾಗುವಂತೆ ಆಗುತ್ತಿತ್ತು. ಸುಮಾರು 18 ಸೆಕೆಂಡ್‌ಗಳ ಶಾರ್ಟ್ ವಿಡಿಯೋ ಇದಾಗಿದ್ದು, ಅದನ್ನು ಬುಜ್ಜಿ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ.
ಅಂದಹಾಗೆ ಈ ವಿಡಿಯೋವನ್ನು ವೀಕ್ಷಿಸಿದ ನೆಟ್ಟಿರು ಸಹ ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಾಗಿದೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಸದ್ಯದಲ್ಲೇ ವಿನಯ್ ಮತ್ತು ರಜತ್ ಅವರನ್ನು ತನಿಖೆಗಾಗಿ ಕರೆಸಿಕೊಳ್ಳುವ ಸಾಧ್ಯತೆ ಇದೆ. ಇನ್ನೂ ಈ ಪ್ರಕರಣದಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3 ಮತ್ತು 4 ಅಡಿ ಕ್ರಮ ಜರುಗಲಿದೆ. ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರಿಂದ ಮಾರಕಾಸ್ತ್ರ ಹಿಡಿದುಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಶಾಂತಿಭಂಗದ ದುರ್ವರ್ತನೆ ತೋರಲಾಗಿದೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಈಗಾಗಲೇ ಯಾರಾದರೂ ಇರಲಿ ನಕಲಿ ಅಥವಾ ಅಸಲಿಯಾಗಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಮಾಜದಲ್ಲಿ ಆತಂಕಕಾರಿ ಹಾಗೂ ಭಯದ ವಾತಾವರಣ ಸೃಷ್ಟಿಸಬಾರದು. ಅಲ್ಲದೆ ಈ ರೀತಿಯ ರೀಲ್ಸ್‌ಗಳನ್ನು ಮಾಡಬಾರದು ಎಂದು ಪೊಲೀಸರು ಸೂಚಿಸಿದ್ದರೂ ಸಹ ಈ ರೀತಿಯ ಪ್ರಕರಣಗಳು ಇನ್ನೂ ಮುಂದುವರೆದಿವೆ. ಅಲ್ಲದೆ ಈ ಪ್ರಕರಣದ ಬಳಿಕ ಪೊಲೀಸರು ಸಾಮಾಜಿಕದಲ್ಲಿ ಅಪ್ಲೋಡ್ ಆಗುವ ಶಾರ್ಟ್ಸ್‌ಗಳ ಮೇಲೆ ಹದ್ದಿನ ಕಣ್ಣಿಟಿದ್ದಾರೆ.