Political News: ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್ ಪೇಟೆಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಮ್ಮನಸ್ಸಿನಿಂದ, ಒಟ್ಟಿಗೇ ಕಾಂಗ್ರೆಸ್ ಗೆಲ್ಲಿಸಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಮತಗಳು ಬೀಳುವುದು ಖಚಿತ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ಅವರ ಗೆಲುವು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಂಪೇಗೌಡ ಜಯಂತಿ ಆರಂಭಿಸಿದ್ದು ನಾವು, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿದ್ದು ನಾವು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದು ನಾವು, ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಆಗಿ ಮಾಡಿದ್ದೇನು? ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಬಿಜೆಪಿ, ಜೆಡಿಎಸ್‌ನಿಂದಲೇ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೆ.ಆರ್.ಪೇಟೆ ಕೃಷ್ಣ ಅವರು ಅತ್ಯಂತ ಸಜ್ಜನರೂ, ಜನಪರ ಕಾಳಜಿ ಇದ್ದವರೂ ಆಗಿದ್ದರು. ಕೃಷ್ಣರವರನ್ನು ಮಂತ್ರಿ ಮಾಡಬೇಕು ಎನ್ನುವ ಇಚ್ಚೆ ನಮಗೆಲ್ಲರಿಗೂ ಇತ್ತು. ಆದರೆ, ಮಂತ್ರಿ ಮಾಡಲು ದೇವೇಗೌಡರು ಒಪ್ಪಿರಲಿಲ್ಲ. ಆಗ ಸ್ಪೀಕರ್ ಆಗುವಂತೆ ಸಲಹೆ ನೀಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನೇಹಾಳನ್ನು ಮತಾಂತರ ಮಾಡುವ ಪ್ರಯತ್ನ ನಡೆದಿತ್ತು ಅಂತಾ ಆಕೆಯ ತಂದೆಯೇ ಹೇಳಿದ್ದಾರೆ: ಪ್ರಹ್ಲಾದ್ ಜೋಶಿ
ಮದುವೆಗೆ ಒಪ್ಪದಿದ್ದಕ್ಕೆ ಹತಾಶೆಯಿಂದ ಕೊಂದಿದ್ದಾನೆ: ನೇಹಾ ತಂದೆ ಹೇಳಿದ್ದೇನು? – ಎಫ್‌ಐಆರ್‌ನಲ್ಲಿ ಏನಿದೆ?