Bihar News:
ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.
ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತಯಾಚನೆ ಸಮಯದಲ್ಲಿ ಬಿಹಾರದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಬಹುಮತಕ್ಕೆ ತಲೆಬಾಗಿದ್ದೇನೆ” ಎಂದು ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ವಿಜಯ್ ಕುಮಾರ್ ಸಿನ್ಹಾ, ನರೇಂದ್ರ ನಾರಾಯಣನ್ ಯಾದವ್ ಅವರು ಸ್ಪೀಕರ್ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು. ಸ್ಪೀಕರ್ ಪೀಠದ ಮೇಲೆ ಅನುಮಾನಗಳನ್ನು ಮೂಡಿಸುವ ಮೂಲಕ ನೀವು ಯಾವ ಸಂದೇಶವನ್ನು ನೀಡಲು ಬಯಸುತ್ತೀರಿ? ಜನರೇ ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.
ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು ಮಾಡಲ್ಲ, ಮಡಿಕೇರಿ ಪ್ರತಿಭಟನೆ ಮುಂದೂಡಿಕೆ – ಸಿದ್ಧರಾಮಯ್ಯ
ಎಸಿಬಿ ರದ್ದು ವಿಚಾರ: ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ – CM ಬೊಮ್ಮಾಯಿ
2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ