ಬಿಜೆಪಿ ಕಾರ್ಯಕರ್ತರ ಮಾರಾಮಾರಿ: ಸಚಿವ ಎದುರೇ ಹೊಡೆದಾಡಿಕೊಂಡು ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಹಾಸನ: ಜಿಲ್ಲೆಯಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಸಚಿವರೆದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ಸಭೆ ನಡೆಸಲಾಗುತ್ತಿತ್ತು. ಪರಿಷತ್ ಪ್ರಚಾರ ಸಭೆಯಲ್ಲೇ ಚುನಾವಣೆಗೆ ಬೆಂಬಲ ನೀಡುವ ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.

ಹೀಗೆ ಅರಸೀಕೆರೆ ನಗರದ ಬಿಜೆಪಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಉಂಟಾದಂತ ಬೆಂಬಲ ನೀಡುವ ಸಂಬಂಧದ ಜಗಳ ತಾರಕಕ್ಕೇರಿ, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಸಚಿವ ಗೋಪಾಲಯ್ಯ ಅವರ ಎದುರೇಗೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬಿಜೆಪಿ ಕಾರ್ಯಕರ್ತರ ಮಾರಾಮಾರಿಯಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಹೀಗೆ ಗಾಯಗೊಂಡ ಬಿಜೆಪಿ ಕಾರ್ಯಕರ್ತರು ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

About The Author