Hebbāḷa.: ನೆನ್ನೆ ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣ ಮಾಡಿ ರಾಮನಗರ ಹಾಗೂ ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಸಚಿವರಾದ ಡಾ ಸಿ. ಎನ್ ಅಶ್ವಥ್ ನಾರಾಯಣ ಭಾಷಣ ಮಾಡುತ್ತಿರುವಾಗ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ ಸುರೇಶ್ ಅಭಿಮಾನಿಗಳು ಜೈಕಾರ ಹಾಕುತ್ತಿದ್ದರು. ಆಗ ಕಾದು ಕೆಂಡವಾದ ಅಶ್ವಥ್ ನಾರಾಯಣ ಗಂಡಸ್ತನದ ಬಗ್ಗೆ ಮಾತನಾಡಿದ್ದು, ಡಿ. ಕೆ ಸುರೇಶ್ ಗೆ ಕೋಪವನ್ನು ಉಂಟುಮಾಡಿತ್ತು. ಈ ಸಮಯದಲ್ಲಿ ಸಚಿವ ಅಶ್ವಥ್ ನಾರಾಯಣ ಹಾಗೂ ಸಂಸದ ಡಿಕೆ ಸುರೇಶ್ ನಡುವೆ ವಾಕ್ಸಮರ ನಡೆಯಿತು. ಈ ಘಟನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಾಕ್ಷಿಯಾದರು. ಈಗ ನೆನ್ನೆ ನಡೆದ ಕಾರ್ಯಕ್ರಮದಲ್ಲಿ ಡಿಕೆ ಸುರೇಶ್ ಹಾಗೂ ಅವರ ಕಾರ್ಯಕರ್ತರು ನಡೆದುಕೊಂಡ ರೀತಿಯನ್ನು ವಿರೋಧಿಸಿ ಇಂದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹೆಬ್ಬಾಳದ ರಸ್ತೆಯ ಬಳಿ ಪ್ರತಿಭಟನೆಯನ್ನು ನಡೆಸಿದ್ದಾರೆ ಈ ವೇಳೆ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಬಿ ನಾರಾಯಣ್ ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷರು , ಹೆಬ್ಬಾಳದ ಪ್ರೆಸಿಡೆಂಟ್ ರಿಷಿಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.