ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಜೆಡಿಎಸ್ ನ ಮತ್ತು ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಹಳೆ ಮೈಸೂರು ಭಾಗದಲ್ಲಿ ಭದ್ರವಾಗಿ ನೆಲೆಯೂರಲು ಬಿಜೆಪಿ ನಿರಂತರ ಪ್ರಯತ್ನ ನಡೆಸುತ್ತಿದೆ.
ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ
ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೊಂದಿಗೆ ವೇದಿಕೆ ಹಂಚಿಕೊಂಡ ಅಮಿತ್ ಶಾ, ಹಳೆ ಮೈಸೂರು ಭಾಗದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಸುಮಾರು 14 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಘಟಕವನ್ನು ಉದ್ಘಾಟಿಸಿದರು.
ಮಂಡ್ಯ ಏಳು ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಆರು ಜೆಡಿಎಸ್ ಮತ್ತು ಒಂದು ಬಿಜೆಪಿ ಉಪಚುನಾವಣೆಯಲ್ಲಿ ಗೆದ್ದಿದೆ. ಜೆಡಿಎಸ್ -ಕಾಂಗ್ರೆಸ್‌ಗೆ ಹಲವು ಅವಕಾಶಗಳು ಸಿಕ್ಕಿದೆ. ಈ ಬಾರಿ ಮಂಡ್ಯ ಮತ್ತು ಮೈಸೂರಿನಲ್ಲಿ ಕಮಲ ಅರಳಲಿದೆ, ಬಹುಮತ ಪಡೆಯುತ್ತೇವೆ ಎಂದು ಶಾ ಹೇಳಿದರು. ಇದುವರೆಗೂ ಬಿಜೆಪಿಯಿಂದ ದೂರ ಉಳಿದಿದ್ದ ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.
ಆದಿಚುಂಚನಗಿರಿ ಮಠದ ಪ್ರಧಾನ ಅರ್ಚಕ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಶಾ ಇಂದು ಭೇಟಿಯಾದರು. ಇದು ಹಳೆಯ ಮೈಸೂರು ಪ್ರದೇಶದಲ್ಲಿ ಅತ್ಯಂತ ಪ್ರಭಾವಶಾಲಿ ಮಠವೆಂದು ಹೇಳಲಾಗಿದೆ.
ಅಮಿತ್ ಶಾ ರಾಜ್ಯ ಪ್ರವಾಸ, ಯೋಜನೆಗಳ ಘೋಷಣೆ ಬಗ್ಗೆ ಡಿಕೆ ಶಿವಕುಮಾರ್ ವ್ಯಂಗ್ಯ