Ramanagara News: ರಾಮನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರವಾಗಿ, ರಾಮನಗರದ ಮಾಗಡಿಯಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಅಂತ ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನ ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿ ಅವ್ರು ದ್ವೇಷದ ರಾಜಕೀಯ ಮಾಡ್ತಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಆಗದೇ ಇರೋ ವಿಚಾರವನ್ನ ಅವರ ಹಣೆಗೆ ಕಟ್ಟುವ ಕೆಲಸ ಆಗ್ತಿದೆ. ಬಿಜೆಪಿಯವ್ರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ರು ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ.
ಬಹುಶಃ ಇದರಿಂದ ಅವರಿಗೆ ಯಾವುದೇ ಅನುಕೂಲ ಆಗಲ್ಲ. ದ್ವೇಷದ ರಾಜಕಾರಣ ಮಾಡಿ ರಾಜ್ಯವನ್ನ ಬಾಂಗ್ಲಾ, ಶ್ರೀಲಂಕಾ ಸ್ಥಿತಿಗೆ ತರುವ ಪ್ರಯತ್ನ ಮಾಡ್ತಿದ್ದಾರೆ. ರಾಜ್ಯದಲ್ಲಿ ಇಷ್ಟೊಂದು ದ್ವೇಷದ ರಾಜಕಾರಣ ಮಾಡಿರೋ ಉದಾಹರಣೆಯೇ ಇಲ್ಲ. ಇದರಿಂದ ನಮ್ಮ ಸಿದ್ದರಾಮಯ್ಯ ರವರ ಒಂದು ಕೂದಲನ್ನೂ ಬಗ್ಗಿಸಲು ಸಾಧ್ಯವಿಲ್ಲ ಎಂದು ಮಾಗಡಿ ಬಾಲಕೃಷ್ಣ ಹೇಳಿದ್ದಾರೆ.