Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ.
ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ ಇಲ್ಲಾ. ಮೋದಿಯವರ ಮಾಸ್ಟರ್ ಸ್ಟ್ರೋಕ್ ನಿಂದ ನಿರುದ್ಯೋಗ ತಾಂಡವ ಆಡ್ತಾ ಇದೆ. ಮಧ್ಯಮ ವರ್ಗ ನಿರ್ಣಾಮ ಆಗಿದೆ. ರೈತರು ದೇಹಯಲ್ಲಿ ಪ್ರತಿಭಟನೆ ಮಾಡ್ತಾ ಇದ್ದಾರೆ. ಕರ್ನಾಟಕ ಎರಡನೇ ಹೆಚ್ಚು ಐಟಿ ಕಂಪನಿ ಹೊಂದಿರುವ ರಾಜ್ಯ. ನಾವು 100 ರೂಪಾಯಿ ಟ್ಯಾಕ್ಸ್ ಕಟ್ಟಿದ್ರೆ 12 ರೂಪಾಯಿ ಕೊಡ್ತಾರೆ. ಯುಪಿ ಅವರಿಗೆ 120, ಬಿಹಾರ 178 ರೂಪಾಯಿ ಹೋಗ್ತಾ ಇದೆ. ಇಡೀ ಭಾರತ ದೇಶವನ್ನು ನಾವು ಸಮರ್ಥವಾಗಿ ನಡೆಸಿಕೊಂಡು ಹೋಗ್ತಾ ಇದ್ದೇವೆ. ನಮ್ಮ ರಾಜ್ಯದಿಂದ ಲೇ ಅತೀ ಹೆಚ್ಚು ಉದ್ಯೋಗ ಸೃಷ್ಟಿ ಆಗ್ತಿರೋದು. ಅದಕ್ಕೆ ಯಾವುದೇ ನೆರವು ನೀಡೋದಿಲ್ಲ ಅಂದ್ರೆ ಹೇಗೆ. ಬಜೆಟ್ ಮೇಲೆ ನನಗೆ ಯಾವುದೇ ನಿರೀಕ್ಷೆ ಇಲ್ಲಾ. ಕಳೆದ ಹತ್ತು ವರ್ಷದಿಂದ ನೋಡಿಕೊಂಡು ಬಂದಿದ್ದೇನೆ. ಅದರ ಆಧಾರದ ಮೇಲೆ ಮಾತನಾಡುತ್ತಿದ್ದೇನೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
ರಾಜ್ಯದ ಅನುದಾನ ಕಳೆದ ಬಾರಿ ಕೇಳಿದ್ದೆ ಇದುವರೆಗೂ ಬಂದಿಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ಮನವಿ ಪತ್ರ ಕೊಡದೆ ನಾವು ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮಾಡಿದ್ದೇವೆ. ಆದರೂ ಕೂಡ ಕೇಂದ್ರದವರು ಕೊಡಲ್ಲ ಅಂದ್ರೆ ನಮಗೆ ಉಪಕಾರ ಮಾಡ್ತಾ ಇದ್ದಾರಾ? ಕೇಂದ್ರ ಸರ್ಕಾರದಿಂದ ಏನು ಬಂದಿಲ್ಲ ಅಂದ್ರೆ ಕಷ್ಟ ಆಗುತ್ತೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
ಬಸವಣ್ಣ ಅವರು ದೇಶ ದ್ರೋಹಿ ನಾ? ಹಿಂದೂ ವಿರೋಧಿನಾ? ಬಿಜೆಪಿ ಅವರಿಗೆ ಕಾಮನ್ ಸೆನ್ಸ್ ಇದೆಯಾ?ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ.
ಪ್ರಭಾವಿ ಸಚಿವರ ಸಭೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ಅವರು ನಮ್ಮ ಮನೆಗೆ, ನಾವು ಅವರ ಮನೆಗೆ ಹೋಗಲೇ ಬಾರದಾ? ಎರಡಮೂರು ದಿನಕ್ಕೊಮ್ಮೆ ನಾನು ಗೃಹ ಸಚಿವರ ಮನೆಯಲ್ಲೇ ಇರ್ತೇನೆ. ನಮ್ಮ ಪಕ್ಷದವರು ಕೂಡ ಹೋಗಬಾರದು ಅಂದ್ರೆ ಹೇಗೆ? ಪರಮೇಶ್ವರ, ಸುರ್ಜೆವಾಲಾ, ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ಕರ್ನಾಟಕದ ಬಗ್ಗೆ ಆಗ್ತಾ ಇರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿ. ನಾವು ಮೂರುವರೆ ವರ್ಷ ಒಳ್ಳೆಯ ಆಡಳಿತ ಕೊಡ್ತೇವೆ ಎಂದು ಪ್ರಿಯಾಂಕ್ ಹೇಳಿಕೆ ಕೊಟ್ಟಿದ್ದಾರೆ.
ಇನ್ನು ಗಂಗಾ ಸ್ನಾನದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಕೊಟ್ಟ ಹೇಳಿಕೆ ಬಗ್ಗೆ ಸಮರ್ಥಿಸಿಕೊಂಡ ಪ್ರಿಯಾಂಕ್, ಗಂಗಾ ಸ್ನಾನ ಮಾಡಿದ್ರೆ ಪಾಪ ಪರಿಹಾರ ಆಗುತ್ತಾ? ಬಿಜೆಪಿ ಅವರು ಹಿಂದೂ ವಿರೋಧಿ ಅಂತಾರೆ. ನಮ್ಮ ದೇಶದಲ್ಲಿ ಬುದ್ದಿಸಮ್, ಜೈನಿಸಮ್, ಸಿಖ್ ಹಾಗೂ ಲಿಂಗಾಯತ ಧರ್ಮಗಳು ಹುಟ್ಟಿವೆ. ಈ ನಾಲ್ಕು ಧರ್ಮಗಳು ಹುಟ್ಟಿದ್ದು ಹಿಂದೂ ಧರ್ಮದ ವಿರುದ್ಧವಾಗಿ. ಯಾವುದರಲ್ಲಿ ಸಮಾನತೆ, ಸ್ವಾಭಿಮಾನ ಇರಲಿಲ್ಲ ಅದರ ವಿರುದ್ಧ ಹುಟ್ಟಿವೆ. ಕೇವಲ ಗಂಗಾ ಅಷ್ಟೇ ಅಲ್ಲಾ ದೇಶದ ಯಾವುದೇ ನದಿಯಲ್ಲಿ ಹೋಗಿ ಡುಮಕಿ ಹೊಡದ್ರೆ ಪಾಪ ಪರಿಹಾರ ಆಗೋದಿಲ್ಲ.
ನಾವು ದುಡಿತಾ ಇರೋದಕ್ಕೆ ಅನುದಾನ ಕೊಡಿ ಸಾಕು. ನಮಗೆ ದೇಶ ದ್ರೋಹಿ ಸರ್ಟಿಫಿಕೇಟ್ ಕೊಡೋಕೆ ಇವರ್ಯಾರು? ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಹೀಗೆಲ್ಲಾ ಮಾಡ್ತಾ ಇದ್ದಾರೆ. ಟ್ರಂಪ್ ಇನ್ವಿಟಷನ್ ಕೊಡಲಿಲ್ಲ ಇಂತಹ ವಿಷಯಗಳ ಮೂಲಕ ಅದನ್ನ ಮುಚ್ಚಿ ಹಾಕೋ ಯತ್ನ ಎಂದು ಬಿಜೆಪಿ ವಿರುದ್ಧ ಪ್ರಿಯಾಂಕ್ ವಾಗ್ದಾಳಿ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪೂಜೆ ಮಾಡಿದ ಫೋಟೋ ವೈರಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಖರ್ಗೆ, ಖರ್ಗೆ ಸಾಹೇಬ್ರು ಬುದ್ಧ, ಬಸವ, ಅಂಬೇಡ್ಕರ್ ಮೇಲೆ ನಂಬಿಕೆ ಇಟ್ಟವರು. ಅವರ ಆಚರಣೆ ನನ್ನ ಮೇಲೆ, ನನ್ನ ಆಚರಣೆ ನನ್ನ ಮಕ್ಕಳ ಮೇಲೆ ಆಗೋದಿಲ್ಲ. ನಿಮ್ಮ ಭಕ್ತಿ ನಿಮಗೆ ನಮ್ಮ ಭಕ್ತಿ ನಮಗೆ. ಭಕ್ತಿ ಆಧ್ಯಾತ್ಮಿಕವಾಗಿ ಇರಬೇಕು, ಮನಶಾಂತಿಗಾಗಿ ಇರ್ಬೇಕು. ಭಕ್ತಿ ವ್ಯಕ್ತಿಗೆ ಬಂದ್ರೆ ಸರ್ವಧಿಕಾರಿ ಆಗ್ತಾನೆ ಅಂತ ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ರು. ಇಡಿ ಯಾಕೆ ಮುಡಾ ತನಿಖೆ ಮಾಡ್ತಾ ಇದೆ? ಮನಿ ಲ್ಯಾಡರಿಂಗ್ ನಲ್ಲಿ ಸಿದ್ದರಾಮಯ್ಯ ಪಾತ್ರ ಇದೆ ಅಂತ ಬಿಂಬಿಸಿದ್ದಾರೆ. ವಿಜಯೇಂದ್ರ ಸಲ್ಲಿಸಿರೋ ಅಫಿಡೆವಿಟ್ ನಲ್ಲಿ ಮನಿ ಲ್ಯಾಂಡರಿಂಗ್ ಅಂಶವಿದೆ. ಆದರೆ ವಿಜಯೇಂದ್ರ ಅವರ ವಿಚಾರ ಇದುವರೆಗೂ ಬಹಿರಂಗಗೊಂಡಿಲ್ಲ. ಸಿದ್ದರಾಮಯ್ಯ ಅವರದ್ದು ಹೇಗೆ ಆಚೆ ಬರುತ್ತೆ. ಇದೆಲ್ಲ ಪೂರ್ವ ನಿಯೋಜಿತ ಅಷ್ಟೇ. ಅಷ್ಟು ಇದ್ದಿದ್ರೆ ಮೇಲೆ ಕೂತ ಇಬ್ಬರು ಬಿಡ್ತಾ ಇದ್ರ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

