State news :ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ ಐಎಎಸ್ ಅಧಿಕಾರಿಗಳಿಂದ ಉಪಚಾರ ಮಾಡಿಸಲಾಗಿದೆ ಎಂಬ ಆರೋಪದಡಿ ಬಿಜೆಪಿ ನಾಯಕರು ಸದನದಲ್ಲಿ ಮಾತಿನ ಚಕಮಕಿ ನಡೆಸಿದರು.
ಜೊತೆಗೆ ಕೇವಲ ಮಾತಿನ ಚಕಮಕಿ ಅಷ್ಟೇ ಆಗಿಲ್ಲ ಸದನದ ಬಾವಿಗಿಳಿದು ಬಿಜೆಪಿ ನಾಯಕರು ವಿಧೇಯಕ ಪತ್ರದ ಜೊತೆಗೆ ಬಿಲ್ ಗಳನ್ನು ಹರಿದು ಸ್ಪೀಕರ್ ರುದ್ರಪ್ಪ ಲಂಬಾಣಿ ಅವರ ಮೇಲೆ ಎಸೆದು ಅಸಭ್ಯ ವರ್ತನೆ ಎಸಗಿದರು. ಈ ಕಾರಣಕ್ಕಾಗಿ ಸದನ ಮುಗಿಯುವ ವರೆಗೂ 10 ವಿಪಕ್ಷ ಬಿಜೆಪಿ ನಾಯಕರನ್ನು ಅಮಾನತು ಮಾಡಿ ಆದೇಶ ನೀಡಲಾಯಿತು.
ರಾಜ್ಯದ ವಿಧಾನಸಭಾ ಅಧಿವೇಶನದಲ್ಲಿ ಜುಲೈ 19 ಬುಧವಾರ ಬಿಜೆಪಿಯ 10 ಶಾಸಕರನ್ನು ಅಧಿವೇಶನದಿಂದ ಅಮಾನತುಗೊಳಿಸಿದೆ. ಇದರಿಂದ ಬೇಸತ್ತಿರುವ ಬಿಜೆಪಿ ನಾಯಕರು ಟ್ವಿಟರ್ ಖಾತೆಯನ್ನು ಬ್ಲ್ಯಾಕ್ ಮಾಡಿ ವಿನೂತನ ಪ್ರತಿಭಟನೆಗೆ ಅಣಿ ಹಾಕಿದ್ದಾರೆ.
ರಾಜ್ಯದಲ್ಲಿ ಸರ್ವಾಧಿಕಾರಿ ಸಿದ್ದರಾಮಯ್ಯ ರವರ ಸರ್ಕಾರದ ತುಘಲಕ್ ದರ್ಬಾರ್ ಮಿತಿ ಮೀರಿದೆ. ಇವರು ಮಾಡುವ ಅನಾಚರಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನೀವು ನಮ್ಮ ಶಾಸಕರನ್ನು ಅಮಾನತು ಮಾಡಬಹುದು, ಹತ್ತಿಕ್ಕಲು ಸಾಧ್ಯವಿಲ್ಲ. ನಿಮ್ಮ ಈ ರಣಹೇಡಿ ದಬ್ಬಾಳಿಕೆಗೆ ನಾವು ಕುಗ್ಗುವುದಿಲ್ಲ. ನಿಮ್ಮ ಜನ ವಿರೋಧಿ, ನಾಡ ವಿರೋಧಿ ನಿಲುವುಗಳ ವಿರುದ್ಧ ನಮ್ಮ ಹೋರಾಟ ಶತ ಸಿದ್ಧ. ಎಂಬುವುದಾಗಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ಸರ್ವಾಧಿಕಾರಿ @siddaramaiahರವರ ಸರ್ಕಾರದ ತುಘಲಕ್ ದರ್ಬಾರ್ ಮಿತಿ ಮೀರಿದೆ.
ಇವರು ಮಾಡುವ ಅನಾಚರಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ.
ನೀವು ನಮ್ಮ ಶಾಸಕರನ್ನು ಅಮಾನತು ಮಾಡಬಹುದು, ಹತ್ತಿಕ್ಕಲು ಸಾಧ್ಯವಿಲ್ಲ.… pic.twitter.com/VHZmGHQoLv
— BJP Karnataka (@BJP4Karnataka) July 19, 2023
Siddaramaiah : ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ
Siddaramaiah : ಸಿಸಿಬಿ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Sudharshan Moodabidire : ಸುದರ್ಶನ್ ಮೂಡುಬಿದಿರೆ ನೇತೃತ್ವದಲ್ಲಿ ಟಿಫಿನ್ ಬೈಠಕ್