Thursday, August 21, 2025

Latest Posts

Congress: ಕರ್ಮಕಾಂಡಗಳನ್ನು ಬಿಚ್ಚುವ ಕಾಲ ಹತ್ತಿರದಲ್ಲಿದೆ: ಡಿಕೆಶಿ

- Advertisement -

ಬೆಂಗಳೂರು :ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ಪ್ರಧಾನಿಗಳು ಹೆದರಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಬುಧವಾರ ಅವರು ಪ್ರತಿಕ್ರಿಯಿಸಿರು.

ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, “ಅದರಲ್ಲಿ ಇರುವುದನ್ನು ಒಂದೇ ಒಂದು ಸಾಬೀತು ಮಾಡಲಿ. ಅವರ ಚಾರ್ಜ್ ‌ಶೀಟ್ ಎಂದರೆ ಏನು? ಅವರಿಗೆ ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯವಿಲ್ಲ.

ಡಿ.ಕೆ.ಶಿವಕುಮಾರ್ 10 – 15 ಪರ್ಸೆಂಟ್ ಕಮಿಷನ್ ಕೇಳಿದರು ಎಂದು ಗುತ್ತಿಗೆದಾರರಿಗೆ ಹೆದರಿಸಿ ಅವರ ಬಾಯಲ್ಲಿ ರಾಜ್ಯಪಾಲರ ಬಳಿ ಸುಳ್ಳು ಹೇಳಿಸಿದರು. ಆನಂತರ ಅದೇ ಗುತ್ತಿಗೆದಾರರು ಪೊಲೀಸರ ಬಳಿ, ರಾಜ್ಯಪಾಲರ ಬಳಿ ನಾವು ಆರೋಪ ಮಾಡಿಲ್ಲ ಎಂದು ಸತ್ಯ ಹೇಳಿದರು” ಎಂದು ವಾಗ್ದಾಳಿ ನಡೆಸಿದರು.

ಕಾವೇರಿ ನೀರು ವಿಚಾರವಾಗಿ ಕೇಳಿದಾಗ, “ನಾಳೆ ದೆಹಲಿಗೆ ಹೋಗುತ್ತಿದ್ದೇನೆ, ಅಲ್ಲಿ ನಮ್ಮ ವಕೀಲರನ್ನು ಭೇಟಿಯಾಗಿ ಕಾವೇರಿ ನೀರಿನ ವಿಚಾರವಾಗಿ ಚರ್ಚೆ ನಡೆಸುತ್ತೇನೆ. ಸೆ.1 ಶುಕ್ರವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ. ತಮಿಳುನಾಡಿನವರು 24 ಸಾವಿರ ಕ್ಯೂಸೆಕ್ಸ್ ಬೇಡಿಕೆ ಇಟ್ಟಿದ್ದರು. ನಮ್ಮ ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿ ನಾವು 3 ಸಾವಿರ ಕ್ಯೂಸೆಕ್ಸ್ ಬಿಡುತ್ತೇವೆ ಎಂದು ಹೇಳಿದ್ದೆವು. ಕೊನೆಗೆ ವಾದ- ವಿವಾದಗಳು ನಡೆದು 5 ಸಾವಿರ ಕ್ಯೂಸೆಕ್ಸ್‌ಗೆ ಇಳಿಸಿದ್ದಾರೆ. ಮುಂದಿನ ಸಭೆಯಲ್ಲಿ ಹೇಗೆ ನಮ್ಮ ವಾದ ಮಂಡಿಸಬೇಕು ಎಂದು ಚರ್ಚೆ ನಡೆಸಲಿದ್ದೇನೆ” ಎಂದು ತಿಳಿಸಿದರು.

Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!

Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

- Advertisement -

Latest Posts

Don't Miss