Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ ಹೆಡಗೇವಾರ್ ಮ್ಯೂಸಿಯಂಗೆ ದಲಿತ ಎಂಬ ಕಾರಣಕ್ಕಾಗಿ ಪ್ರವೇಶ ಕೊಟ್ಟಿಲ್ಲ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ಅಲ್ಲದೆ ಈ ನಿಯಮ ಬಿಜೆಪಿಯ ದಲಿತ ನಾಯಕರಿಗೆ ಅನ್ವಯ ಆಗುತ್ತಾ? ಎಂದು ಕೇಳಿದ್ದಾರೆ.
ಹಿಂದುತ್ವದಲ್ಲಿ ಆರ್ ಎಸ್ ಎಸ್ ತತ್ವದಲ್ಲಿ ದಲಿತರಿಗೆ, ಹಿಂದುಳಿದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ, ಬಡವರಿಗೆ ಜಾಗ ಇಲ್ಲ ಎಂದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದರು.
RSS ನವರು ದಲಿತ ಸಮುದಾಯದ ಗೂಳಿಹಟ್ಟಿಗೆ ಪ್ರವೇಶ ನೀಡದೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ಬಸವ ತತ್ವ ಪಾಲನೆ ಮಾಡ್ತೀವಿ ಎಂದು ಹೇಳುತ್ತಿರುವ ಬಿಜೆಪಿ ನಾಯಕರು ಇದಕ್ಕೆ ಉತ್ತರಿಸಬೇಕು. ಇದು ಅವರ ಪಕ್ಷದ ಮಾಜಿ ಸಚಿವ ಕೇಳುತ್ತಿರುವ ಪ್ರಶ್ನೆ ಎಂದರು.
‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’
ಜಾತಿ ಕಾರಣಕ್ಕೆ ನನ್ನನ್ನು ಆರ್ಎಸ್ಎಸ್ ಕಚೇರಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ: ಗೂಳಿಹಟ್ಟಿ ಶೇಖರ್
‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

