Sunday, December 22, 2024

Latest Posts

ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಅಂತ ಘೋಷಿಸುತ್ತೆ..!

- Advertisement -

www.karnatakatv.net: ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಅಂತ ಎಂಐಎo ನಾಯಕ ಓವೈಸಿ ಹೇಳಿಕೆ ನೀಡಿದ್ದಾರೆ.

ಮಹಾತ್ಮ ಗಾಂಧಿ ಅವರ ಮನವಿಯ ಮೇರೆಗೆ ಸಾವರ್ಕರ್ ಅವರು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದರು ಅನ್ನೋ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಂಐಎA ನಾಯಕ ಓವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಗರು ತಿರುಚಿದ ಇತಿಹಾಸವನ್ನು ಮಂಡಿಸುತ್ತಿದ್ದಾರೆ. ಇದು ಇದೇ ರೀತಿ ಮುಂದುವರೆದಲ್ಲಿ ಮಹಾತ್ಮ ಗಾಂಧಿ ಅವರ ಬದಲಾಗಿ, ಸಾವರ್ಕರ್ ಅವರನ್ನೇ ರಾಷ್ಟ್ರಪಿತ ಅಂತ ಘೋಷಿಸಲಿದ್ದಾರೆ ಎಂದು ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೀರ್ ಸಾವರ್ಕರ್ ಭಾರತದ ಇಬ್ಭಾಗವನ್ನು ತಡೆಯಬಹುದಾಗಿದ್ದ ವ್ಯಕ್ತಿ” ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಜನಾಥ್ ಸಿಂಗ್, “ಸಾವರ್ಕರ್ ಅವರು ಬ್ರಿಟೀಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದು ಮಹಾತ್ಮ ಗಾಂಧಿ ಅವರ ಮನವಿಯ ಮೇರೆಗೆ” ಎಂದು ಹೇಳಿದರು.

- Advertisement -

Latest Posts

Don't Miss