Sunday, September 8, 2024

Latest Posts

‘ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ’

- Advertisement -

Political News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಗಿಯೇ ಇದ್ದೇವೆ. ಆದರೆ ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರು ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ. ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿತ್ತು. ಶೇ.75 ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರುಗಳನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ದ ಮಾಡಿಕೊಂಡಿದ್ದಾರೆ. ಅವರು ಇನ್ನೂ ವರದಿಯನ್ನ ಕೊಟ್ಟಿಲ್ಲ. ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದರು.

ಇನ್ನು ಕರ್ನಾಟಕಕ್ಕೆ 50 ವರ್ಷ ಎಲ್ಲರಿಗೂ ಇದೊಂದು ಸುವರ್ಣಾವಕಾಶ. ಇಡೀ ವರ್ಷ ಹಬ್ಬದ ಆಚರಣೆಗೆ ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ಗುರುವಾರ ರಾತ್ರಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇವತ್ತು ಗದಗನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ. ಇವತ್ತು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು‌ ತಿಳಿಸಿದರು.

ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ವರದಿ ಕೊಡಲಿ. ನಮ್ಮ ಸರ್ಕಾರದಿಂದ ಚಲುವರಾಯ ಸ್ವಾಮಿ, ಕೃಷ್ಣ ಭೈರೆಗೌಡ್ರು ತಂಡ ಬರ ಅಧ್ಯಯನ ಮಾಡಿದೆ. ಎಲ್ಲಾ ಜಿಲ್ಲೆಗಳಿಗೆ ಹೋಗಿ ಅಧ್ಯಯನ ಮಾಡಿ 175 ತಾಲೂಕಗಳನ್ನ ಬರ ಎಂದು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿ ಖಾತೆಯಲ್ಲಿ ಒಂದು ಸಾವಿರ ಕೋಟಿಗು ಹೆಚ್ಚು ಹಣ ಮೀಸಲಿಡಲಾಗಿದೆ ಎಂದರು.

ಇದೇ ವೇಳೆ ಡಿ.ಕೆ.ಶಿವಕುಮಾರ ಅವರು ನಿಗಮ ಮಂಡಳ ನೇಮಕ ವಿಚಾರದಲ್ಲಿ ಜಾರಿಕೊಂಡರು.

‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

ಸರ್ಕಾರಿ ಶಾಲೆಯ ಮಕ್ಕಳ ಅಭಿವೃದ್ಧಿಯತ್ತ ಚಿತ್ತ‌ಹರಿಸಿದ ಕಾಂಗ್ರೆಸ ‌ಶಾಸಕ

- Advertisement -

Latest Posts

Don't Miss