Wednesday, June 12, 2024

Latest Posts

ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ ಗೊತ್ತಿಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ? ನಾವು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟವರು. ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಹಾಗೂ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Anjali Case: ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು

G.Parameshwar Press Meet: ಹೆಚ್ಡಿಕೆ ಫೋನ್ ಟ್ರ್ಯಾಪ್ ಆರೋಪಕ್ಕೆ ತಿರುಗೇಟು ನೀಡಿದ ಗೃಹಸಚಿವರು

ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

- Advertisement -

Latest Posts

Don't Miss