ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಕು.ಶೋಭಾ ಕರಂದ್ಲಾಜೆ, ಬಿಜೆಪಿ ಚುನಾವಣಾ ಸಾಂಸ್ಕøತಿಕ ಪ್ರಚಾರ ಮತ್ತು ಬೀದಿ ನಾಟಕ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಕಲಾತಂಡಗಳು ರಾಜ್ಯದ ಮೂಲೆ ಮೂಲೆಗೆ ಸಂಚರಿಸಿ ಪಕ್ಷದ ಧ್ಯೇಯೋದ್ದೇಶಗಳು, ತತ್ವ-ಸಿದ್ಧಾಂತಗಳು, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಸಾರಲಿವೆ. ಅತ್ಯುತ್ತಮ ಪ್ರದರ್ಶನದೊಂದಿಗೆ ಕಲಾವಿದರು ಜನರನ್ನು ತಲುಪಲಿದ್ದಾರೆ ಎಂದು ಹೇಳಿದರು.
‘ಕಾಂಗ್ರೆಸ್‌ನವರು ಹತಾಶರಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕುಂಡದಲ್ಲಿರುವ ಹೂ ತೆಗೆದುಕೊಂಡು ಹೋಗಿದ್ದಾರೆ’
ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..