www.karnatakatv.net : ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, “ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, “ಬಿ.ಆರ್. ಅಂಬೇಡ್ಕರ್‌ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್ ಪಕ್ಷ, ಮೊದಲ ಸಚಿವ ಸಂಪುಟದಲ್ಲಿ ನೋವಾಗಿ ಅಂಬೇಡ್ಕರ್ ರಾಜೀನಾಮೆ ನೀಡಿದ್ದರು,” ಎಂದು ಕಿಡಿಕಾರಿದರು.

“ಅಂಬೇಡ್ಕರ್ ಲೋಕಸಭೆ ಚುನಾವಣೆಗೆ ನಿಂತಾಗ ಸೋಲಿಸಿದರು, ನಂತರ 2ನೇ ಬಾರಿ ಅವರ ಸಹಾಯಕನನ್ನು ಚುನಾವಣೆಗೆ ಎದುರು ನಿಲ್ಲಿಸಿ ಸೋಲಿಸಿದರು. ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೂ ಜಾಗ ಕೊಡಲಿಲ್ಲ, ಭಾರತ ರತ್ನವೂ ಕೊಡಲಿಲ್ಲ, ಅಂಬೇಡ್ಕರ್‌ಗೆ ಭಾರತರತ್ನ ಕೊಟ್ಟಿದ್ದು ನಾವು,” ಎಂದು ಹೇಳಿದರು.