Saturday, July 12, 2025

Latest Posts

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

- Advertisement -

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ.

ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ಸೆಪ್ಟೆಂಬರ್‌ಗೆ ಸಿಎಂ ಚೇಂಜ್‌ ಆಗುತ್ತಾರೆ. ಈ ಬಾರಿ ದಸರಾವನ್ನು ಸಿದ್ದರಾಮಯ್ಯನವರು ಮಾಡುವುದಿಲ್ಲ ದಸರಾಗೆ ಹೊಸ ಸಿಎಂ ಬರ್ತಾರೆ ಎಂತೆಲ್ಲಾ ಭವಿಷ್ಯ ನುಡಿದಿದ್ದರು. ಈಗ ಬಿಜೆಪಿಯ ಮತ್ತೊಬ್ಬ ಹಿರಿಯನಾಯಕ ಡಿಸೆಂಬರ್‌ ನಲ್ಲಿ ಕಾಂಗ್ರೆಸ್ ಸರ್ಕಾರವೇ‌ ಪತನವಾಗುತ್ತೆ ಎಂದಿದ್ದಾರೆ. ಡಿಸೆಂಬರ್‌ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಅಂತಾ ಭವಿಷ್ಯ ನುಡಿದಿದ್ದಾರೆ.

ಮುಂದುವರಿದ ಮಾತನಾಡಿದ ಗೋವಿಂದ ಕಾರಜೋಳ, ಪ್ರಧಾನಿ ನರೇಂದ್ರ ಮೋದಿಯವರ ನಿರಂತರ ಪರಿಶ್ರಮದಿಂದ ದೇಶದ ಆರ್ಥಿಕ ಸ್ಥಿತಿ 14ನೇ ಸ್ಥಾನದಿಂದ 4ನೇ ಸ್ಥಾನಕ್ಕೆ ಏರಿದೆ. ಆದರೆ, ಕಾಂಗ್ರೆಸ್‌ಗೆ ಮಾತ್ರ ಮೋದಿಯವರ ಕೆಲಸ ಕಣ್ಣಿಗೆ ಕಾಣುತ್ತಿಲ್ಲ. ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ. ಹಿಂದಿನ ಸರ್ಕಾರದ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಿಗೆ ಹೊಸ ಹೆಸರಿನಲ್ಲಿ ಉದ್ಘಾಟನೆ ಮಾಡುವ ಸ್ಥಿತಿ ರಾಜ್ಯ ಸರ್ಕಾರದ್ದು. ನಾಡಿನ ಜನರ ಶಾಪದಿಂದ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ.

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರದ ದಾಹ ದಿನದಿಂದ ದಿನಕ್ಕೆ ಮೀರುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಹೊಂದಾಣಿಕೆಯಲ್ಲಿ ಬಾರಿ ಅಂತರವಿದ್ದು ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಳ್ಳುವ ಕಾಲ ಹತ್ತಿರ ಬಂದಿದೆ. 2025ರ ಡಿಸೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಪಕ್ಷ ಪತನಗೊಂಡು ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಹಿರಿಯನಾಯಕ, ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಭವಿಷ್ಯ ನುಡಿದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಲು, ವಿದ್ಯುತ್, ಬಸ್, ನೋಂದಣಿ ಶುಲ್ಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರತಿ ವ್ಯಕ್ತಿ ತಿಂಗಳಿಗೆ 10 ಸಾವಿರ ಹಣ ಭರಿಸುವ ಸ್ಥಿತಿ ಉಂಟಾಗಿದೆ. ಮಹಿಳೆಯರಿಗೆ ಉಚಿತ ಬಸ್, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ನೀಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಶಾಸಕರಿಗೆ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಬೇಸರಗೊಂಡಿದ್ಧಾರೆ. ಎಲ್ಲಾ ರಂಗದಲ್ಲೂ ಕಾಂಗ್ರೆಸ್ ಪಕ್ಷ ವಿಫಲವಾಗಿದೆ, ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದಿದ್ದಾರೆ.

- Advertisement -

Latest Posts

Don't Miss