- Advertisement -
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ ಬೆಳೆದ ಬೆಳೆಗಳು ನಾಶವಾಗಿದ್ದು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದರು ಈ ಬಾರಿ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಮುಂದೆ ಮುರುಗೇಶ್ ನಿರಾಣಿ ಹೇಳುತ್ತಾರೆ, ಇವರು ಕಾಂಗ್ರೆಸ್ ನ ಉಳಿಗಾಲದ ಬಗ್ಗೆ ಮಾತನಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
- Advertisement -