Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ.
ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ ನಾನು ನೇಹಾಳ ಮನೆಗೆ ಭೇಟಿ ನೀಡುತ್ತೇನೆ. ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಸಿ.ಐ.ಡಿ ತನಿಖೆಗೆ ವಹಿಸಲಾಗುವುದು ಹಾಗೂ ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಯವರು ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ನ್ನು ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದೆ, ಅದೇ ಸಿದ್ಧಾಂತದ ನಮಗೆ ಅವರ ಬೆಂಬಲ ಅಗತ್ಯವಿದೆ. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವ ಮಾತಲ್ಲ. ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ನೀಡಿದರೆ ಡೇಂಜರ್ ಆಗುತ್ತವೆಯೇ? ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ. ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗರಗದಲ್ಲೂ ಸ್ವಯಂ ಪ್ರೇರಣೆಯ ಬಂದ್: ನೇಹಾ ಕುಟುಂಬದ ಪರ ನಿಂತ ಹಿಂದೂ ಕಾರ್ಯಕರ್ತರು
ನಾಮಪತ್ರ ವಾಪಸ್ ಪಡೆದಿದ್ದೇನೆ, ಆದ್ರೆ ಧರ್ಮಯುದ್ಧದಿಂದ ಹಿಂದೆ ಸರಿಯುವುದಿಲ್ಲ: ದಿಂಗಾಲೇಶ್ವರ
ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!