Saturday, July 27, 2024

Latest Posts

ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -

Political News: ಮಡಿಕೇರಿಯ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯವದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮೊದಲು ಬಿಜೆಪಿ 600 ಭರವಸೆಗಳನ್ನು ಕೊಟ್ಟು 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ. ಬಿಜೆಪಿ ಪ್ರಣಾಳಿಕೆಯ ರೂಪದಲ್ಲಿ ಹೊಸ ಹೊಸ ಭ್ರಮೆಯನ್ನು ಸೃಷ್ಟಿಸುತ್ತಿದೆ. ಹೊಸ ಪ್ರಣಾಳಿಕೆಯ ಬಗ್ಗೆ ಮಾತನಾಡುವ ಮೊದಲು ಅವರು ಈ ಹಿಂದೆ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ಹಾಕಿದರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದರೇ? ಮೆಕ್ ಇನ್ ಇಂಡಿಯಾ ಏನಾಗಿದೆ? ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ? 10 ವರ್ಷಗಳಲ್ಲಿ ಪ್ರಧಾನಮಂತ್ರಿಯಾಗಿ ಏನು ಮಾಡಿದ್ದಾರೆ ಎಂದು ನರೇಂದ್ರ ಮೋದಿ ಅವರು ಮೊದಲು ಹೇಳಬೇಕು. ಅದರ ಅವಲೋಕನ ಆದ ನಂತರ ಮುಂದಿನದ್ದು ಹೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀನಿವಾಸ ಪ್ರಸಾದ್ ರಾಜಕೀಯದಲ್ಲಿ ಸಮಕಾಲೀನರು. ಅವರು 74ರಲ್ಲಿಯೇ ವಿಧಾನಸಭೆಗೆ ಸ್ಪರ್ಧಿಸಿದ್ದರು, ನಾವೆಲ್ಲ ಒಟ್ಟಿಗೆ ರಾಜಕಾರಣದಲ್ಲಿದ್ದೆವು. ದೀರ್ಘ ಕಾಲದ ಸ್ನೇಹಿತ. ಅವರು ರಾಜಕೀಯದಿಂದ ನಿವೃತ್ತರಾಗಿ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಥ ಸಂದರ್ಭದಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದರೆ ಏನರ್ಥ? ಎರಡು ಬಾರಿ ಮುಖ್ಯಮಂತ್ರಿಯಾದವರು ಆಡುವ ಮಾತೇ ಇದು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿ ಗ್ಯಾರಂಟಿ ಶಾಶ್ವತ ಗ್ಯಾರಂಟಿ. ದೇಶ ಮತ್ತು ಬದುಕು ಕಟ್ಟುವ ಗ್ಯಾರಂಟಿ: ಬಸವರಾಜ ಬೊಮ್ಮಾಯಿ

ವಿಕಸಿತ ಭಾರತ ಸಂಕಲ್ಪದ‌ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ: ಬಿಜೆಪಿ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಜೋಶಿ

- Advertisement -

Latest Posts

Don't Miss